25.5 C
Bangalore
Monday, December 16, 2019

ಸಂಭ್ರಮದ ಈದುಲ್ ಫಿತ್ರ್ ಆಚರಣೆ

Latest News

ಜೆಡಿಎಸ್ ಕಾರ್ಯಕರ್ತರನ್ನು ಸೂರಜ್ ರೇವಣ್ಣ ಪ್ರಚೋದಿಸಿರುವ ಆಡಿಯೋ ಇದೆ, ಮಾಜಿ ಸಚಿವ ಎ.ಮಂಜು ಹೊಸ ಬಾಂಬ್

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್...

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಮಂಗಳೂರು/ಉಡುಪಿ: ರಮಜಾನ್ ತಿಂಗಳ ಉಪವಾಸದ ಬಳಿಕ ಶವ್ವಾಲ್ ತಿಂಗಳ ಆರಂಭದ ದಿನ ಈದುಲ್ ಫಿತ್ರ್ ಹಬ್ಬವನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾದ್ಯಂತ ಸಂಭ್ರಮದಿಂದ ಬುಧವಾರ ಆಚರಿಸಲಾಯಿತು. ಸಾಂಪ್ರದಾಯಿಕ ಉಡುಗೆ ತೊಟ್ಟು ಶ್ರದ್ಧಾಭಕ್ತಿಯೊಂದಿಗೆ ನಗರದ ವಿವಿಧ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

- Advertisement -

ಮಂಗಳೂರು ಬಾವುಟಗುಡ್ಡ ಈದ್ಗಾ ಮಸೀದಿಯಲ್ಲಿ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನೇತೃತ್ವದಲ್ಲಿ ಈದ್ ನಮಾಝ್, ಪ್ರವಚನ ಮತ್ತು ಸಂದೇಶ ನಡೆಯಿತು. ಶಾಹ ಅಮೀರ್ ಅಲಿ ಮಸೀದಿಯ ಇಮಾಮ್ ಮೌಲಾನ ರಿಯಾಝುಲ್ ಹಖ್ ಈದ್ ನಮಾಝ್ ಬಗ್ಗೆ ಮಾಹಿತಿ ನೀಡಿದರು.

ಉಳ್ಳಾಲ ಕೇಂದ್ರ ಜುಮಾ ಮಸೀದಿ ಸಹಿತ ಉಭಯ ಜಿಲ್ಲೆಗಳ ನೂರಾರು ಮಸೀದಿಗಳಲ್ಲಿ ವಿಶೇಷ ನಮಾಝ್, ಪ್ರವಚನ ಬಳಿಕ ಪರಸ್ಪರ ಹಸ್ತಲಾಘವ, ಆಲಿಂಗನ ಮೂಲಕ ಹಬ್ಬದ ಶುಭಾಶಯ ವಿನಿಮಯ ಹಾಗೂ ಮನೆಗಳಲ್ಲಿ ವಿಶೇಷ ಆಹಾರ ಖಾದ್ಯ ಸವಿಯುವ ಮೂಲಕ ಹಬ್ಬದ ಸಂಭ್ರಮ ನಡೆಯಿತು.

ಉಡುಪಿಯ ಜಾಮೀಯ ಮಸೀದಿಯಲ್ಲಿ ಮೌಲಾನ ಅಬ್ದುರಶೀದ್ ನದ್ವಿ ನೇತೃತ್ವದಲ್ಲಿ ಹಾಗೂ ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ನಮಾಜ್ ಬಳಿಕ ಈದ್ ಸಂದೇಶ ನೀಡಲಾಯಿತು. ಜಿಲ್ಲಾ ಸಂಯುಕ್ತ ಜಮಾಅತ್‌ನ ಕೇಂದ್ರ ಮಸೀದಿ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಬಿ.ಕೆ.ಅಬ್ದುರಹ್ಮಾನ್ ಮದನಿ ನೇತೃತ್ವದಲ್ಲಿ ಈದ್ ನಮಾಜ್ ಮತ್ತು ಖುತ್ಬಾ ಪಾರಾಯಣ ನಡೆಯಿತು.
ಮಲ್ಪೆ ಸೇರಿದಂತೆ ಹಲವೆಡೆ ಮಸೀದಿ ಸಮಿತಿ ಸದಸ್ಯರು, ಮುಸ್ಲಿಮರು ನೆರೆಹೊರೆ ಮನೆಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಗೆ ಸಿಹಿ ಹಂಚಿ ಹಬ್ಬವನ್ನು ಸಂಭ್ರಮಾಚರಿಸಿದರು. ಬಂಧುಮಿತ್ರರನ್ನು ರಮಜಾನ್ ಕೂಟಕ್ಕೆ ಆಹ್ವಾನಿಸಿ ಬಿರಿಯಾನಿ, ಖೀರ್ ಊಟ ಬಡಿಸಿ ಸಂಭ್ರಮಿಸಿದರು.

ವಿಜಯವಾಣಿ ಕಾರ್ಯಕ್ಕೆ ಶ್ಲಾಘನೆ
ಹುಬ್ಬಳ್ಳಿ: ಪವಿತ್ರ ರಮಜಾನ್ ಮಾಸ ಆರಂಭದಿಂದ ತಿಂಗಳ ಕಾಲ ಪ್ರವಾದಿ ಮಹಮ್ಮದ್ ಪೈಗಂಬರರ ತತ್ವ ಸಂದೇಶ, ಆಚರಣೆ ಬಗ್ಗೆ ಅಂಕಣ, ಲೇಖನಗಳನ್ನು ಪ್ರಕಟಿಸಿದ ‘ವಿಜಯವಾಣಿ’ ಮುಸ್ಲಿಂ ಸಮುದಾಯದ ವಿಶೇಷ ಮೆಚ್ಚುಗೆಗೆ ಪಾತ್ರವಾಗಿದೆ. ಆಚರಣೆಯ ಅರ್ಥ, ಉದ್ದೇಶಗಳ ಕುರಿತು ಪತ್ರಿಕೆ ಮೂಲಕ ಬೆಳಕು ಚೆಲ್ಲಿದ್ದರ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಯುವ ಮುಸ್ಲಿಂ ಮುಖಂಡರು, ಬೆಂಗಳೂರಿನ ಸಿಗ್ಮಾ ೌಂಡೇಶನ್‌ನ ಹುಬ್ಬಳ್ಳಿ ಶಾಖೆ ನಾಯಕರು ಬುಧವಾರ ಹುಬ್ಬಳ್ಳಿಯ ವಿಜಯವಾಣಿ ಕಚೇರಿಗೆ ಆಗಮಿಸಿ ಸಿಹಿ ಹಂಚಿ ಸಂತಸ ಹಂಚಿಕೊಂಡರು.

ಸೌಹಾರ್ದ ಸಭೆ
ಈದ್ ನಮಾಝ್ ಬಳಿಕ ಮಂಗಳೂರಿನ ಬಾವುಟಗುಡ್ಡ ಈದ್ಗಾ ಮಸೀದಿ ಆವರಣದಲ್ಲಿ ಸರ್ವಧರ್ಮೀಯ ಗಣ್ಯರ ಸಮ್ಮುಖದಲ್ಲಿ ಸೌಹಾರ್ದ ಸಭೆ ನಡೆಯಿತು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್, ಮಸ್ಜಿದ್ ಝೀನತ್ ಬಕ್ಷ್ ಅಧ್ಯಕ್ಷ ವೈ.ಅಬ್ದುಲ್ಲ ಕುಂಞಿ ಹಬ್ಬದ ಸಂದೇಶ ನೀಡಿದರು. ಮಾಜಿ ಶಾಸಕ ಜೆ.ಆರ್.ಲೋಬೊ, ಸಂತ ಅಲೋಶಿಯಸ್ ಕಾಲೇಜು ಪ್ರಾಂಶುಪಾಲ ಪ್ರವೀಣ್ ಮಾರ್ಟಿಸ್, ಮಂಗಳೂರು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್, ಡಿಸಿಪಿ ಹನುಮಂತರಾಯ ಮತ್ತಿತರರು ಉಪಸ್ಥಿತರಿದ್ದರು.

ಮಹಿಳೆಯರಿಂದ ನಮಾಜ್
ಉಡುಪಿ ಬ್ರಹ್ಮಗಿರಿ ನಾಯರ್‌ಕೆರೆ ಮಸೀದಿಯಲ್ಲಿ ಮುಸ್ಲಿಮ್ ಮಹಿಳೆಯರಿಗೂ ನಮಾಜ್ ಮಾಡಲು ವ್ಯವಸ್ಥೆ ಮಾಡಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡು ನಮಾಜ್ ನೆರವೇರಿಸಿದರು. ಧರ್ಮಗುರು ಮೌಲಾನ ಹಶ್ಮಿ ಉಮ್ರಿ ರಮಜಾನ್ ಸಂದೇಶ ನೀಡಿದರು. ನಮಾಜ್ ಬಳಿಕ ಮಸೀದಿ ಅಧ್ಯಕ್ಷ ಝಕ್ರಿಯ ಅಸ್ಸಾದಿ, ಸಾಮಾಜಿಕ ಕಾರ್ಯಕರ್ತ ಇಕ್ಬಾಲ್ ಮನ್ನ ಮೊದಲಾದವರು ಸಿಹಿ ಹಂಚಿದರು.

ಜನ ಸಂಚಾರ ವಿರಳ
ಈದುಲ್ ಫಿತ್ರ್ ಹಬ್ಬ ಪ್ರಯುಕ್ತ ಮಂಗಳೂರು ನಗರದ ಮುಸ್ಲಿಮರ ವ್ಯಾಪಾರ ಮಳಿಗೆಗಳು ಬಂದ್ ಹಾಗೂ ಸರ್ಕಾರಿ ರಜೆಯಾದ ಕಾರಣ ಬುಧವಾರ ನಗರ ಖಾಲಿ ಖಾಲಿಯಾಗಿ ಕಂಡುಬಂತು. ಸದಾ ಜನಜಂಗುಳಿಯಿಂದ ಕೂಡಿರುವ ಸ್ಟೇಟ್‌ಬ್ಯಾಂಕ್ ಪರಿಸರ ಬಿಕೋ ಎನ್ನುತ್ತಿತ್ತು. ಕೇಂದ್ರ ಮಾರುಕಟ್ಟೆಯಲ್ಲೂ ಮುಸ್ಲಿಂ ವ್ಯಾಪಾರಸ್ಥರ ಅಂಗಡಿಗಳು ಬಂದ್ ಆಗಿದ್ದವು. ಆಟೋ ರಿಕ್ಷಾಗಳು ಕಡಿಮೆ ಸಂಖ್ಯೆಯಲ್ಲಿ ಕಂಡುಬಂತು.

ಈದುಲ್ ಫಿತ್ರ್ ಹಬ್ಬ ಕುಟುಂಬ, ಸಮಾಜ, ದೇಶ ಮತ್ತು ಜಾಗತಿಕ ಮಟ್ಟದಲ್ಲಿ ಮನುಷ್ಯ- ಮನುಷ್ಯನ ನಡುವಿನ ಸಂಬಂಧ ವೃದ್ಧಿಗೆ ಪ್ರೇರಣೆ ನೀಡಲಿ. ಹಳಸಿದ ಸಂಬಂಧಗಳು ಮರು ಜೋಡಣೆಯಾಗಲಿ. ಕೆಡುಕನ್ನು ಒಳಿತಿನ ಮೂಲಕ ಎದುರಿಸಿ ಎಂಬ ಕುರಾನ್ ಸಂದೇಶ ಹಾಗೂ ಪರಸ್ಪರ ಪ್ರೀತಿ, ವಿಶ್ವಾಸದ ಮೂಲಕ ಜಗತ್ತನ್ನು ಗೆದ್ದಿರುವ ಪ್ರವಾದಿ ಬೋಧನೆ ನಮಗೆಲ್ಲಾ ಮಾರ್ಗದರ್ಶಿಯಾಗಲಿ.
– ತ್ವಾಖಾ ಅಹ್ಮದ್ ಮುಸ್ಲಿಯಾರ್, ದಕ್ಷಿಣ ಕನ್ನಡ ಜಿಲ್ಲಾ ಖಾಝಿ

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...