More

    ಕತಾರ್‌ನಲ್ಲಿ ಬಂಧಿತರಾಗಿರುವ 8 ಭಾರತೀಯರ ಬಿಡುಗಡೆಗೆ ಯತ್ನ: ಕುಟುಂಬಗಳಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭರವಸೆ

    ನವದೆಹಲಿ: ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಎಂಟು ಮಾಜಿ ಸಿಬ್ಬಂದಿಯ ಕುಟುಂಬಗಳನ್ನು ಸೋಮವಾರ ಭೇಟಿ ಮಾಡಿದ ವಿದೇಶಾಂಗ ಸಚಿವ ಎಸ್.ಜೈಶಂಕರ್, ಅವರ ಬಿಡುಗಡೆಗೆ ಎಲ್ಲ ಪ್ರಯತ್ನ ಮಾಡುತ್ತದೆ ಎಂದು ಭರವಸೆ ನೀಡಿದರು.

    ಇದನ್ನೂ ಓದಿ: ವಿಶ್ವಸಂಸ್ಥೆಯಲ್ಲಿ ಗಾಜಾ ಮತದಾನಕ್ಕೆ ಭಾರತ ಗೈರು: ಸೋನಿಯಾ ಗಾಂಧಿ ವಿರೋಧ
    ಸರ್ಕಾರವು ಪ್ರಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ಕುಟುಂಬಗಳ ಕಳವಳ ಮತ್ತು ನೋವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದೇವೆ. ಅವರ ಬಿಡುಗಡೆಗೆ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುವುದನ್ನು ಮುಂದುವರಿಸುತ್ತದೆ. ಈ ನಿಟ್ಟಿನಲ್ಲಿ ಕುಟುಂಬಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸುತ್ತದೆ ಎಂದು ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ.

    ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಸಿಷ್ಟ್, ಸಿಡಿಆರ್ ಅಮಿತ್ ನಾಗ್ಪಾಲ್, ಸಿಡಿಆರ್ ಪೂರ್ಣೇಂದು ತಿವಾರಿ, ಸಿಡಿಆರ್ ಸುಗುಣಾಕರ್ ಪಕಾಲ, ಸಿಡಿಆರ್ ಸಂಜೀವ್ ಗುಪ್ತಾ ಮತ್ತು ನಾವಿಕ ರಾಗೇಶ್ ಅವರಿಗೆ ಶಿಕ್ಷೆ ವಿಧಿಸಲಾಗಿದೆ.

    ನೌಕಾಪಡೆಯ ಈ ಮಾಜಿ ಅಧಿಕಾರಿಗಳು ಕತಾರ್‌ನ ಸಶಸ್ತ್ರ ಪಡೆಗಳಿಗೆ ತರಬೇತಿ ಮತ್ತು ಸಂಬಂಧಿತ ಸೇವೆಗಳನ್ನು ಒದಗಿಸುವ ಖಾಸಗಿ ಸಂಸ್ಥೆ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್‌ಗಾಗಿ ಕೆಲಸ ಮಾಡುತ್ತಿದ್ದರು. ಈ ಪರಿಣತರ ಮೇಲೆ ಬೇಹುಗಾರಿಕೆ ಆರೋಪವಿದೆ. ಬಂಧಿತ ಮಾಜಿ ಅಧಿಕಾರಿಯೊಬ್ಬರ ಸಹೋದರಿ ಜೂನ್‌ನಲ್ಲಿ ತನ್ನ ಸಹೋದರನನ್ನು ಮರಳಿ ಕರೆತರಲು ಸರ್ಕಾರದ ಸಹಾಯ ಕೋರಿದ್ದರು.

    ಸ್ವಿಸ್​ ಮಹಿಳೆ ಕೊಲೆ ಪ್ರಕರಣ ಭೇದಿಸಿದ ದೆಹಲಿ ಪೊಲೀಸರು: ಕಸದ ಚೀಲದಲ್ಲಿ ಹಾಕಿ ಉಸಿರುಗಟ್ಟಿಸಿ ಕೊಂದಿದ್ದ ಪಾಪಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts