More

    ಭೂಕುಸಿತ; ರಾತ್ರಿ ಮಲಗಿದ್ದವರೆಲ್ಲ ಮಣ್ಣಿನಡಿ ಜೀವಂತ ಸಮಾಧಿ

    ಇಟಾನಗರ: ಅರುಣಾಚಲ ಪ್ರದೇಶದ ಪಾಪಮ್​ ಪೇರ್​ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿ ಎಂಟು ಮಂದಿ ಜೀವಂತ ಸಮಾಧಿಯಾಗಿದ್ದಾರೆ. ಅದರಲ್ಲಿ ಮೂವರು ಮಕ್ಕಳು.

    ಎರಡು ಕಡೆಗಳಲ್ಲಿ ಪ್ರತ್ಯೇಕ ಭೂಕುಸಿತವಾಗಿದೆ. ಟಿಜ್ಡೋ ಗ್ರಾಮದಲ್ಲಿ ನಡೆದ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಎಲ್ಲರೂ ನಿದ್ದೆ ಮಾಡುತ್ತಿದ್ದ ಸಂದರ್ಭದಲ್ಲಿ ಭೂಕುಸಿತವುಂಟಾಗಿ ಅವಘಡ ಸಂಭವಿಸಿದೆ.
    ಈ ಘಟನೆಯಲ್ಲಿ 24 ವರ್ಷದ ವ್ಯಕ್ತಿ ಆತನ 22ವರ್ಷದ ಪತ್ನಿ, ಎಂಟು ತಿಂಗಳ ಮಗು ಮತ್ತು 17 ವರ್ಷದ ಸಹೋದರ ಮೃತಪಟ್ಟಿದ್ದಾರೆ.

    ಇನ್ನೊಂದು ಭೀಕರ ಭೂಕುಸಿತ ಮೋದಿರಿಜೋ ಎಂಬಲ್ಲಿ ಮಧ್ಯಾಹ್ನ 12.30ರ ಹೊತ್ತಿಗೆ ನಡೆದಿದೆ. ಈ ಘಟನೆಯಲ್ಲಿ 30 ವರ್ಷದ ಮಹಿಳೆ, ಅವರ ಇಬ್ಬರು ಹೆಣ್ಣುಮಕ್ಕಳು ಮತ್ತು ಮತ್ತೋರ್ವ 20 ವರ್ಷದ ಯುವತಿ ಸಾವನ್ನಪ್ಪಿದ್ದಾರೆ.
    ಇನ್ನೂ ಇಬ್ಬರು ಮಕ್ಕಳು ತೀವ್ರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ‘ಮೌನವಾಗಿರುವುದೇ ಉತ್ತಮವೆನಿಸುತ್ತಿದೆ…’: ವಿಕಾಸ್​ ದುಬೆ ಎನ್​ಕೌಂಟರ್​ ಬಗ್ಗೆ ರಾಹುಲ್ ಗಾಂಧಿ ಟ್ವೀಟ್​

    ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರು ಘಟನೆ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬದವರಿಗೆ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಅಷ್ಟೇ ಅಲ್ಲ, ಸಡಿಲ ಮಣ್ಣಿನ ಜಾಗದಲ್ಲಿ ಮನೆ ಕಟ್ಟಿಕೊಂಡವರು ಆದಷ್ಟು ಬೇಗ ಅಲ್ಲಿಂದ ಬೇರೆ ಕಡೆಗೆ ಹೋಗಿ ನೆಲೆಸಿ ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.

    ಈಗಾಗಲೇ ಇಡೀ ರಾಜ್ಯದಲ್ಲಿ ಸಿಕ್ಕಾಪಟೆ ಮಳೆಯಾಗುತ್ತಿದ್ದು, ಇನ್ನೂ ಮುಂದಿನ ಕೆಲವು ದಿನಗಳಲ್ಲಿ ಮತ್ತಷ್ಟು ಮಳೆ ಬರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. (ಏಜೆನ್ಸೀಸ್​)

    24 ಗಂಟೆಯಲ್ಲಿ 2ಸಾವಿರಕ್ಕೂ ಅಧಿಕ ಕರೊನಾ ಸೋಂಕಿತರು ಪತ್ತೆ; ಸಾವಿರ ಮಂದಿ ಡಿಸ್​​ಚಾರ್ಜ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts