More

    ಏಕಲವ್ಯ ಶಾಲೆ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

    ದೇವದುರ್ಗ: ಕೇಂದ್ರ ಬುಡಕಟ್ಟು ಮಂತ್ರಾಲಯ ಇಲಾಖೆಯಿಂದ ಚಿತ್ರದುರ್ಗ ಜಿಲ್ಲೆಯ ದೇವರಕೊಟ್ಟ ಗ್ರಾಮದಲ್ಲಿ ಇತ್ತೀಚೆಗೆ ಜರುಗಿದ ರಾಜ್ಯ ಮಟ್ಟದ 4ನೇ ಬುಡಕಟ್ಟು ವಿದ್ಯಾರ್ಥಿಗಳ ಕಲಾ ಉತ್ಸವದಲ್ಲಿ ತಾಲೂಕಿನ ಕೊತ್ತದೊಡ್ಡಿ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ಇದನ್ನೂ ಓದಿ: ಸಂಜನಾ ನಾಗರಹಳ್ಳಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

    ರಸಪ್ರಶ್ನೆ ವಿಭಾಗದಲ್ಲಿ ಶಾಲೆಯ ದ್ವಿತೀಯ ಪಿಯು ವಿದ್ಯಾರ್ಥಿಗಳಾದ ರಾಧಿಕಾ ಶಿವಪ್ಪ ನಾಯಕ ಕಕ್ಕಲದೊಡ್ಡಿ, ರಕ್ಷಿತಾ ಹನುಮಂತ (ಪ್ರ), ಭರತ ನಾಟ್ಯ ವಿಭಾಗದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿ ಮಹಾದೇವಿ ಗೋವಿಂದಪ್ಪ (ಪ್ರ) ಹಾಗೂ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಪಿಯು ವಿದ್ಯಾರ್ಥಿ ಸುಮಂಗಲಾ ಸೋಮಣ್ಣ (ಪ್ರ) ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ಶಿಕ್ಷಕರ ವಿಭಾಗದಲ್ಲಿ ಶ್ರೀನಿವಾಸ್ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಉತ್ತರಖಂಡ ರಾಜ್ಯದ ಡೆಹರಾಡೂನ್‌ನಲ್ಲಿ ಆಯೋಜಿಸಲಾದ ಮೂರು ದಿನಗಳ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಲೆಯ ಪ್ರಾಚಾರ್ಯ ದುರಗಪ್ಪ ಕುಣೆಕಲ್ಲೂರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಶಿಕ್ಷಕರು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts