ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಅನರ್ಹತೆ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ರೆಬೆಲ್​ ನಾಯಕ ಏಕನಾಥ್​ ಶಿಂಧೆ

blank

ನವದೆಹಲಿ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಇದೀಗ ಸುಪ್ರೀಂಕೋರ್ಟ್​​ ಅಂಗಳಕ್ಕೆ ತಲುಪಿದೆ. ಬಂಡಾಯ ನಾಯಕ ಏಕನಾಥ್​ ಶಿಂಧೆ ಅವರು ಸೇರಿದಂತೆ ಇತರ 15 ಶಾಸಕರನ್ನು ಅನರ್ಹಗೊಳಿಸಿರುವ ಶಿವಸೇನೆಯ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಈ ಪ್ರಕರಣದ ವಿಚಾರಣೆ ನಾಳೆ ನಡೆಯಲಿದೆ.


ತಮ್ಮನ್ನು ಪದಚ್ಯುತಗೊಳಿಸುವ ವಿಷಯ ನಿರ್ಧಾರವಾಗುವವರೆಗೆ ಅನರ್ಹತೆ ಅರ್ಜಿಯ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಂತೆ ಉಪ ಸ್ಪೀಕರ್‌ಗೆ ಆದೇಶ ನೀಡುವಂತೆ ಬಂಡಾಯ ಶಾಸಕರು ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿದ್ದಾರೆ. ಅಲ್ಲದೆ ತಮ್ಮ ಕುಟುಂಬಗಳಿಗೆ ಭದ್ರತೆ ಒದಗಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆಯೂ ಅವರು ನ್ಯಾಯಾಲಯವನ್ನು ಕೋರಿದ್ದಾರೆ.
.
ಉಪಸಭಾಪತಿ ನರಹರಿ ಜಿರ್ವಾಲ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಿ ಅಜಯ್ ಚೌಧರಿ ಅವರನ್ನು ಶಿವಸೇನೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಿರುವುದನ್ನು ಏಕನಾಥ್ ಶಿಂಧೆ ನೇತೃತ್ವದ ರೆಬೆಲ್​ ಶಾಸಕರು ಪ್ರಶ್ನಿಸಿದ್ದಾರೆ.

16 ಶಾಸಕರನ್ನು ಅನರ್ಹಗೊಳಿಸುವಂತೆ ಶಿವಸೇನೆ ಉಪಸ್ಪೀಕರ್​ಗೆ ಮನವಿ ಸಲ್ಲಿಸಿದೆ. ಅಲ್ಲದೇ ಸೋಮವಾರ ಸಂಜೆಯೊಳಗೆ ಉತ್ತರಿಸುವಂತೆ ತಿಳಿಸಲಾಗಿದೆ. ಸದ್ಯ ಶಿವಸೇನೆಯ ಈ ಕ್ರಮವನ್ನು ಕಾನೂನು ಬಾಹಿರ ಎಂದಿರುವ ಶಿಂಧೆ ಪಾಳಯ, ಅನರ್ಹತೆಯ ವಿಷಯ ವಿಧಾನಸಭೆಯಲ್ಲಿನ ವಿಷಯಗಳಿಗೆ ಮಾತ್ರ ಸಂಬಂಧಿಸಿದ್ದು,ಪಕ್ಷದ ಸಭೆಗಲ್ಲ ಎಂದು ಹೇಳಿದೆ. ಸದ್ಯ ನಾಳೆ ಸುಪ್ರೀಂಕೋರ್ಟ್​ನಲ್ಲಿ ನಡೆಯಲಿರುವ ವಿಚಾರಣೆಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. (ಏಜೆನ್ಸೀಸ್​)

Share This Article

2025ರಲ್ಲಿ ಈ 3 ರಾಶಿಯವರಿಗೆ ರಾಜಯೋಗ!? ಅನೇಕ ರೀತಿಯಲ್ಲಿ ಹಣದ ಹರಿವು, ಐಷಾರಾಮಿ ಜೀವನ | Royal Life

Royal Life : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…

ಜೇನುತುಪ್ಪ ಜತೆ ಹುರಿದ ಶುಂಠಿ ತಿಂದರೆ ಗಂಟಲು ನೋವು ಮಾಯಾ! ಹೀಗಿವೆ ಪ್ರಯೋಜನಗಳು

ಬೆಂಗಳೂರು: ಜೇನುತುಪ್ಪ ಮತ್ತು ಶುಂಠಿ ಆರೋಗ್ಯಕ್ಕೆ ತುಂಬಾ ಪ್ರಯೋಜನ ಎಂಬ ವಿಷಯ ಬಹುತೇಕರಿಗೆ ತಿಳಿದಿದೆ. ಈ…

ಸಾಮಾನ್ಯವಾಗಿ ಮಾಡುವ ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ ಎಚ್ಚರ! Relationship Tips

Relationship Tips : ಪರಸ್ಪರ ತಿಳುವಳಿಕೆಯುಳ್ಳ ಉತ್ತಮ ಲೈಂಗಿಕ ಜೀವನವು ಸಂತೋಷದ ದಾಂಪತ್ಯಕ್ಕೆ ಕಾರಣವಾಗುತ್ತದೆ. ಲೈಂಗಿಕ…