More

    ಹಿರಿಯರ ಆರೋಗ್ಯ ರಕ್ಷಣೆ ಅತ್ಯಗತ್ಯ

    ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ 92 ವರ್ಷದ ವೃದ್ಧರೊಬ್ಬರು ಮಾರಕ ಕರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಆಗುತ್ತಿರುವುದು ಸಂತಸ ತಂದಿದೆ ಎಂದು ಕೆಎಲ್‌ಇ ಸಂಸ್ಥೆ ಡಾ.ಪ್ರಭಾಕರ ಕೋರೆ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.ಎಂ.ವಿ. ಜಾಲಿ ಹೇಳಿದ್ದಾರೆ.

    ವಿಶ್ವ ಹಿರಿಯ ನಾಗರಿಕರ ದಿನದ ನಿಮಿತ್ತ ಡಾ.ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಗುರುವಾರ ಸರಳವಾಗಿ ಹಿರಿಯರ ದಿನ ಆಚರಿಸಿದ ಬಳಿಕ ಮಾತನಾಡಿ, ಕರೊನಾ ಸಾಂಕ್ರಾಮಿಕ ರೋಗವು ವಯಸ್ಸಾದವರ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ, ಅವರ ಆರೋಗ್ಯ ರಕ್ಷಣೆ ಅತ್ಯಂತ ಮುಖ್ಯವಾಗಿದೆ. ಕೇವಲ ಆರೋಗ್ಯ ಮಾತ್ರವಲ್ಲ, ಅವರ ಹಕ್ಕುಗಳು ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆಯು ಅನೇಕ ಕ್ರಮಕೈಗೊಂಡಿದೆ ಎಂದರು.

    ಕೋವಿಡ್ ಕೇರ್ ತಂಡದ ಡಾ.ಮಾಧವ ಪ್ರಭು ಮಾತನಾಡಿ, ಕರೊನಾ ರೋಗಿಗಳಿಗೆ ಕೆಎಲ್‌ಇ ಆಸ್ಪತ್ರೆಯಲ್ಲಿ ವಿವಿಧ ರೀತಿಯ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿಯವರೆಗೆ ಸುಮಾರು 1,450ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಶೇ.89 ರೋಗಿಗಳು ಗುಣಮುಖ ರಾಗಿದ್ದಾರೆ ಎಂದರು. ಡಾ.ಜಿ.ಎಸ್.ಗಾವಡೆ, ಡಾ. ರಾಜೇಶ ಪವಾರ ಇನ್ನಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts