ಆಟೋರಿಕ್ಷಾ ಡಿಕ್ಕಿಯಾಗಿ ವೃದ್ಧ ಸಾವು

Accident
Published on

ಪಡುಬಿದ್ರಿ: ನಂದಿಕೂರು ರಾಮ ಮಂದಿರ ಬಳಿ ಮಂಗಳವಾರ ಆಟೋ ರಿಕ್ಷಾ ಡಿಕ್ಕಿಯಾಗಿ ಪಲಿಮಾರು ಗ್ರಾಮದ ಶಿವಾನಂದ(72) ಎಂಬುವರು ಮೃತಪಟ್ಟಿದ್ದಾರೆ. ಅಪಘಾತದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರನ್ನು ಪಡುಬಿದ್ರಿ ಖಾಸಗಿ ಆಸ್ಪತ್ರೆಗೆ ನಂತರ ಉಡುಪಿ ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುದಾಗಿ ತಿಳಿಸಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net