ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ

leela
Published on

ಸುಳ್ಯ: ಅರಂತೋಡಿನಲ್ಲಿ ನವೆಂಬರ್ 23ರಂದು ನಡೆಯಲಿರುವ ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಲೀಲಾ ದಾಮೋದರ್ ಆಯ್ಕೆಯಾಗಿದ್ದಾರೆ.

ಕನ್ನಡ ಭವನದಲ್ಲಿ ನಡೆದ ಕ.ಸಾ.ಪ. ಕಾರ್ಯಕಾರಿ ಸಮಿತಿ ಸದಸ್ಯರು, ಸಮ್ಮೇಳನ ಸ್ವಾಗತ ಸಮಿತಿ ಮತ್ತು ಸಮ್ಮೇಳನದ ಪೂರ್ವಾಧ್ಯಕ್ಷರ ಸಭೆಯಲ್ಲಿ ಲೀಲಾ ದಾಮೋದರ್ ಅವರನ್ನು ಸರ್ವಾನುಮತದಿಂದ ಆಯ್ಕೆ ವಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಕ.ಸಾ.ಪ. ಕಾರ್ಯಕಾರಿ ಸಮಿತಿ ಸದಸ್ಯರು, ಸಮ್ಮೇಳನದ ಸ್ವಾಗತ ಸಮಿತಿಯ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net