More

    ಮನೆಮನೆ ಮತದಾನ ಯಶಸ್ವಿ

    ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರು ಮತ್ತು ವಿಕಲಚೇತನರ ಅಂಚೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿದ್ದು, ಶೇ.95.79 ಮತದಾನವಾಗಿದೆ.
    ಚುನಾವಣಾ ಆಯೋಗವು 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಮನೆಗೆ ಮತಗಟ್ಟೆ ಅಧಿಕಾರಿಗಳು ಪೊಲೀಸ್ ಭದ್ರತೆಯೊಂದಿಗೆ ಮತದಾನ ಪಡೆಯುವ ವಿಧಾನ ರೂಪಿಸಿದೆ. ಇದರ ಅನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಹಿರಿಯ ನಾಗರಿಕರು ಮತ್ತು ವಿಕಲಚೇತನರ ಮನೆಗೆ ತೆರಳಿದ ಚುನಾವಣಾ ಸಿಬ್ಬಂದಿ ಅವರಿಂದ ಅಂಚೆ ಮೂಲಕ ಮತದಾನ ಮಾಡಿಸಿದರು. 85 ವರ್ಷಕ್ಕಿಂತ ಮೇಲ್ಪಟ್ಟ ಮತದಾರರು ಶೇ. 40 ಕ್ಕಿಂತ ಹೆಚ್ಚಿನ ವಿಕಲಚೇತನ ಮತದಾರರು ಮನೆಯಿಂದ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಮನೆಯಿಂದ ಮತದಾನ ಮಾಡುವ ಸೌಲಭ್ಯವನ್ನು ಆಯ್ಕೆ ಮಾಡಿಕೊಂಡಿರುವ 85 ವರ್ಷ ಮೇಲ್ಪಟ್ಟ ಹಿರಿಯ ಮತದಾರರು ಹಾಗೂ ವಿಕಲಚೇತನರಿಗೆ ಮತದಾನ ಮಾಡಲು ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳು ದಿನಾಂಕ ನಿಗದಿಪಡಿಸಿದ್ದರು.
    ಶೇಕಡವಾರು ಮತದಾ:
    ಹೊಸಕೋಟೆ 147. 93.63%
    ದೇವನಹಳ್ಳಿ. 104. 95.41%
    ದೊಡ್ಡಬಳ್ಳಾಪುರ 257 96.62%
    ನೆಲಮಂಗಲ 198. 96.59%
    ಒಟ್ಟು. 706. 95.79%
    85 ವರ್ಷ ಮೇಲ್ಪಟ್ಟ ಹಿರಿಯ ಮತದಾರರು, ಪಿಡಬ್ಲ್ಯೂಡಿ ಮತದಾರರು 12ರ ಅಡಿ ಮನೆಯಲ್ಲಿ ಮತದಾನ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 85 ವರ್ಷ ಮೇಲ್ಪಟ್ಟವರು ಮತ್ತು ವಿಕಲಚೇತನರು 706 ಮಂದಿ ಮತ ಚಲಾಯಿಸಿದ್ದಾರೆ.ಶೇ 95.79ಮತದಾನವಾಗಿದೆ. ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರ ಮತ್ತು ವಿಕಲಚೇತನರು ಮನೆಯಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
    -ಡಾ.ಎನ್.ಶಿವಶಂಕರ್ ಜಿಲ್ಲಾಧಿಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts