More

    ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲ್ಲ

    ವಿಜಯವಾಣಿ ಸುದ್ದಿಜಾಲ ನೆಲಮಂಗಲ/ದೊಡ್ಡಬಳ್ಳಾಪುರ
    ನರೇಂದ್ರ ಮೋದಿ ಮತ್ತು ಎಚ್.ಡಿ.ದೇವೇಗೌಡರ ಸಮಾಗಮದಿಂದಾಗಿ ಲೋಕಸಭೆ ಚುನಾವಣೆಯಲ್ಲಿ ತ್ರಿಬಲ್ ಎಂಜಿನ್ ಗೆಲುವಿನ ಗಾಳಿ ಬೀಸುತ್ತಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.
    ನೆಲಮಂಗಲ ಮತ್ತು ದೊಡ್ಡಬಳ್ಳಾಪುರದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಪ್ರಚಾರ ನಡೆಸಿ ಮಾತನಾಡಿದರು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಇರುವವರೆಗೂ ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲೇ ಉಳಿಯಲಿದೆ. ಬಿಜೆಪಿ ಯಾವಾಗಲೂ ಆಡಳಿತದ ಸ್ಥಾನದಲ್ಲಿದ್ದು ಜನ ಕಲ್ಯಾಣ ಕಾರ್ಯಗಳನ್ನು ಮಾಡಲಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನೀರಾವರಿಗೆ ಕೊಟ್ಟಷ್ಟು ಕೊಡುಗೆಗಳನ್ನು ಯಾರೂ ಕೊಟ್ಟಿಲ್ಲ ಎಂದರು. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಹಿಳೆಯರ ಬಗ್ಗೆ ಕೆಟ್ಟದಾಗಿ ಹೇಳಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ. ಅದರೆ ಮಹಿಳೆಯರಿಗಾಗಿಯೇ ಕುಮಾರಸ್ವಾಮಿ ಸಾರಾಯಿ ನಿಷೇಧ ಮಾಡಿದ್ದರು. ರೈತರ ಸಾಲ ಮನ್ನಾ ಮಾಡಿದ್ದರು. ಕಾಂಗ್ರೆಸ್‌ಗೆ ಹೇಳಲು ಸಾಧನೆಗಳ ಸರಕು ಇಲ್ಲದೆ ಈ ರೀತಿ ತಂತ್ರ ಹೆಣೆಯುತ್ತಿದೆ ಎಂದರು. ಕಾಂಗ್ರೆಸ್ ಇಂಡಿ ಕೂಟ ಮಾಡಿಕೊಂಡು ಮಂಡಿಯಲ್ಲಿ ಭಾರತವನ್ನೇ ಮಾರಾಟ ಮಾಡಲು ಮುಂದಾಗಿದೆ. 40 ಸ್ಥಾನಕ್ಕಿಂತ ಹೆಚ್ಚು ಬರಲ್ಲ ಎನ್ನುವುದು ಗೊತ್ತಿರುವುದರಿಂದ ಹಾಗೂ ಮುಂದಿನ 50 ವರ್ಷ ಅಧಿಕಾರ ಸಿಗದಿರುವುದು ಖಚಿತವಾಗಿರುವುದರಿಂದ ಗ್ಯಾರಂಟಿ ಕಾರ್ಡ್‌ಗಳನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶವನ್ನು ಪಾಕಿಸ್ತಾನಕ್ಕಿಂತ ಹಿಂದಕ್ಕೆ ಕೊಂಡೊಯ್ಯಲಿದೆ ಎಂದರು.
    ಕಾಂಗ್ರೆಸ್‌ಗೆ ಸವಾಲು:
    ದಲಿತರಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂಪಾಯಿಯನ್ನು ಗ್ಯಾರಂಟಿಗೆ ಬಳಸಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡದೆ ದೆಹಲಿಗೆ ಕಳುಹಿಸಲಾಗಿದೆ. ದಲಿತರ ಬಗ್ಗೆ ಕಾಂಗ್ರೆಸ್‌ಗೆ ಗೌರವ ಇದ್ದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಬೇಕಿತ್ತು ಎಂದು ಸವಾಲು ಹಾಕಿದರು. ಡಾ.ಬಿ.ಆರ್.ಅಂಬೇಡ್ಕರ್ ಹೆಸರು ಹೇಳಲು ಕಾಂಗ್ರೆಸ್‌ಗೆ ನೈತಿಕತೆ ಇಲ್ಲ. ಬಾಬಾ ಸಾಹೇಬರನ್ನು ಎರಡು ಬಾರಿ ಸೋಲಿಸಿದ್ದೇ ಕಾಂಗ್ರೆಸ್ ಎಂದರು.
    ಬಡತನ ನಿವಾರಣೆ ಇಲ್ಲ, ಪಿಕ್ ಪಾಕೆಟ್ ಸರ್ಕಾರ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಹಿಂದೆ ಇಂದಿರಾಗಾಂಧಿ ಬಡತನ ನಿರ್ಮೂಲನೆ ಮಾಡುವ ಯೋಜನೆ ಜಾರಿ ಮಾಡಿದ್ದರೂ ಬಡತನ ನಿವಾರಿಸಿಲ್ಲ. ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದ್ದೇವೆ ಎಂದು ಗ್ಯಾರಂಟಿಗಳನ್ನು ತೋರಿಸಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಮಹಿಳೆಯರಿಗೆ ಹಣ ನೀಡಿ, ಪುರುಷರಿಂದ ಹಣ ಪಡೆಯಲಾಗುತ್ತಿದೆ. ಇದು ಪಿಕ್ ಪಾಕೆಟ್ ಸರ್ಕಾರ ಎಂದು ಟೀಕಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts