More

    ಹೆಸರು ನೋಂದಣಿಗೆ ಮೇ 6ರವರೆಗೆ ಅವಕಾಶ

    ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಮಾಹಿತಿ

    ಜೂ.3ರಂದು ಮತದಾನ


    ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
    ವಿಧಾನ ಪರಿಷತ್ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ.3 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಮೇ 6 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್ ತಿಳಿಸಿದರು.
    ದೇವನಹಳ್ಳಿಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ತಿಳಿಸಿದರು. ವಿಧಾನ ಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು ಮೇ 9 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಮೇ 16 ಕೊನೆ ದಿನ. 17 ನಾಮಪತ್ರಗಳ ಪರಿಶೀಲನೆ ನಾಮಪತ್ರಗಳನ್ನು ಹಿಂಪಡೆಯಲು ಮೇ 20 ಕೊನೆ ದಿನವಾಗಿದೆ. ಜೂ.3ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಜೂ.6 ಮತ ಎಣಿಕೆ ನಡೆಯಲಿದೆ. ಜೂ.12 ಕ್ಕೆ ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳಲಿದೆ. ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಮೇ 2 ರಿಂದ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ಪದವೀಧರರ ಕ್ಷೇತ್ರದ ಅಂತಿಮ ಮತದಾರ ಪಟ್ಟಿಯಂತೆ 9378 ಪುರುಷ ಪದವೀಧರರು ಹಾಗೂ 8270 ಮಹಿಳಾ ಪದವೀಧರರು ಸೇರಿ 17648 ಪಟ್ಟಿಯಲ್ಲಿ ನೊಂದಾಯಿಸಿಕೊಂಡಿದ್ದಾರೆ ಎಂದರು.
    ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿ:
    ಮತದಾರರ ನಿರಂತರ ನೋಂದಣಿ ಪ್ರಕ್ರಿಯೆ ಜಾರಿಯಲ್ಲಿರುತ್ತದೆ. ಈಗಾಗಲೇ 2023 ಡಿ.30 ರಂದು ಅಂತಿಮ ಮತದಾರರ ಪಟ್ಟಿ ಪ್ರಚೂರ ಪಡಿಸಲಾಗಿದೆ, ಹೊಸದಾಗಿ ನೋಂದಾಯಿಸಬೇಕಾದ ಮತದಾರರಿಗೆ ಮೇ 6 ರ ಸಂಜೆ 5.30 ರವರೆಗೆ ನೋಂದಣಿಗಾಗಿ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ನಿರಂತರವಾಗಿ ಜಾರಿಯಲ್ಲಿರುತ್ತದೆ. ರ್ಹರಿರುವ ಮತದಾರರು ನಿಗದಿ ಪಡಿಸಿದ ಕಾಲ ಮಿತಿಯೊಳಗೆ ನೋಂದಣಿ ಪ್ರಕ್ರಿಯೆಗಾಗಿ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಿ ಹೆಸರನ್ನು ನೊಂದಾಯಿಸಿಕೊಂಡು ಮತದಾನ ಹಕ್ಕನ್ನು ಚಲಾಯಿಸಿ ಸುಭದ್ರ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಸೂಕ್ತ ಪಾತ್ರವಹಿಸುವಂತೆ ಮನವಿ ಮಾಡಿದ್ದಾರೆ.
    ಸಹಾಯವಾಣಿ: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಇತರೆ ವಿಷಯಗಳ ಬಗ್ಗೆ ಸಾರ್ವಜನಿಕರಿಂದ ಸ್ವೀಕರಿಸುವ ಅಹವಾಲುಗಳನ್ನು ನಿವಾರಿಸುವ ಸಲುವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಲ್ಲಿ ದೂರು ನಿವಾರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಸಹಾಯವಾಣಿ ಸಂಖ್ಯೆಗಳನ್ನು ನಿಗದಿಪಡಿಸಲಾಗಿದೆ:
    ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆ 080-29902025, ಉಪವಿಭಾಗಾಧಿಕಾರಿ ಕಚೇರಿ 080-27622037, ತಹಸೀಲ್ದಾರ್ ಕಚೇರಿ 080-27931237, 080-22122999, 080-27622002, ಸಹಾಯವಾಣಿ 080-27722126 ಕರೆ ಮಾಡಬಹುದು ಎಂದು ಡಿಸಿ ತಿಳಿಸಿದರು.
    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಒಂದು ಅತ್ಯಂತ ಮಹತ್ವಪೂರ್ಣ ಹಾಗೂ ಪವಿತ್ರ ಕಾರ್ಯವಾಗಿರುತ್ತದೆ. ಈ ಚುನಾವಣೆಯನ್ನು ನಿಷ್ಪಕ್ಷಪಾತವಾಗಿ ಜರುಗುವಲ್ಲಿ ಪ್ರತಿ ಮತದಾರರು ಹಾಗೂ ಎಲ್ಲಾ ರಾಜಕೀಯ ಪಕ್ಷದವರು ಸಕಾರತ್ಮಕವಾಗಿ ಕಾರ್ಯನಿರ್ವಹಿಸಿ ಚುನಾವಣೆಯನ್ನು ಯಶಸ್ವಿಯಾಗಿ ನಿರ್ವಹಿಸುಬೇಕು ಈ ಬಗ್ಗೆ ಎಲ್ಲರು ಜವಾಬ್ದಾರಿಯನ್ನು ಅರಿತುಕೊಂಡು ಅದಕ್ಕನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಬೆಂಗಳೂರು ಪದವೀಧರರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts