More

    ಅ.1ಕ್ಕೆ ಹುಳಿಯಾರು ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ; ಕುದುರೆ ವ್ಯಾಪಾರ ಆರಂಭ

    ಹುಳಿಯಾರು : ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ನಂತರ ನಡೆದಿರುವ ಮೊದಲ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರು ಅಧಿಕಾರ ಹಿಡಿಯುವ ದಿನ ಸನ್ನಿಹಿತವಾಗಿದೆ. ಕರೊನಾ ಕಾರಣಕ್ಕೆ ಮುಂದೂಡಿಕೆಯಾಗಿದ್ದ ಹುಳಿಯಾರು ಪಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಅಕ್ಟೋಬರ್ 1ಕ್ಕೆ ನಿಗದಿಯಾಗಿದೆ.

    ಅಧ್ಯಕ್ಷ ಸ್ಥಾನವು ಸಾವಾನ್ಯ ವರ್ಗಕ್ಕೂ, ಉಪಾಧ್ಯಕ್ಷ ಸ್ಥಾನವು ಸಾವಾನ್ಯ ಮಹಿಳೆ ವರ್ಗಕ್ಕೆ ಮೀಸಲಿರಿಸಲಾಗಿದೆ ಚುನಾವಣಾಧಿಕಾರಿಯಾಗಿ ಚಿಕ್ಕನಾಯಕನಹಳ್ಳಿ ತಹಸೀಲ್ದಾರ್ ತೇಜಸ್ವಿನಿ ಕರ್ತವ್ಯ ನಿರ್ವಹಿಸಲಿದ್ದಾರೆ.

    16 ಸದಸ್ಯ ಬಲದ ಹುಳಿಯಾರು ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ 6, ಕಾಂಗ್ರೆಸ್ 5, ಜೆಡಿಎಸ್ 3 ಹಾಗೂ ಪಕ್ಷೇತರರು 2 ಸ್ಥಾನ ಪಡೆದಿದ್ದು ಯಾರಿಗೂ ಬಹುಮತ ಸ್ಪಷ್ಟ ಸಿಕ್ಕಿಲ್ಲ ಹಾಗಾಗಿ, ಕುದುರೆ ವ್ಯಾಪಾರ ಆರಂಭವಾಗಿದ್ದು ಕದನ ಕುತೂಹಲ ಮೂಡಿಸಿದೆ.
    ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಪ್ರತಿಷ್ಠೆಯಾಗಿರುವ ಹುಳಿಯಾರು ಪಪಂನಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿಲ್ಲದಿದ್ದರೂ ಅಧಿಕಾರವಿಡಿಯುವ ವಿಶ್ವಾಸ ಬಿಜೆಪಿ ಪಾಳಯದಲ್ಲಿದೆ, ಬಿಜೆಪಿಗೆ ಅಧಿಕಾರ ತಪ್ಪಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಈಗಾಗಲೇ ಹೊಂದಾಣಿಕೆ ಮಾಡಿಕೊಂಡಿದ್ದರೂ ಲಿತಾಂಶ ಮಾತ್ರ ಕುತೂಹಲ ಉಳಿಸಿಕೊಂಡಿದೆ.

    ಒಟ್ಟು 16 ಸದಸ್ಯ ಬಲದ ಪಪಂನಲ್ಲಿ ಬಿಜೆಪಿ 6, ಕಾಂಗ್ರೆಸ್ 5, ಜೆಡಿಎಸ್ 3 ಹಾಗೂ 2 ಸ್ವತಂತ್ರ್ಯ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಸ್ಥಳೀಯ ಶಾಸಕ, ಸಂಸದರ ಮತಗಳು ಬಿಜೆಪಿ ಪಾಲಿಗಿದ್ದರೆ, ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ ಎಂಎಲ್‌ಸಿ ಮತ ಜೆಡಿಎಸ್ ಪರವಾಗಿದೆ. ಸದಸ್ಯರೆಲ್ಲಾ ಮೊದಲ ಸಭೆಗೆ ಹಾಜರಾದರೆ ಬಹುಮತಕ್ಕೆ ಹತ್ತು ಮತ ಅಗತ್ಯವಾಗಲಿದ್ದು ಯಾರೂ ಅಧಿಕಾರ ಹಿಡಿಯುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

    ನಾಮಪತ್ರ ಸಲ್ಲಿಸಲು ಅವಕಾಶ : ಅ.1ರಂದು ಬೆಳಗ್ಗೆ 10ರಿಂದ 11ರವರೆಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳು ಖುದ್ದಾಗಿಯಾಗಲೀ, ಸೂಚಕರ ಮೂಲಕವಾಗಲೀ ತಮ್ಮ ಲಿಖಿತ ಒಪ್ಪಿಗೆಯ ಹಾಗೂ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಪಪಂ ಕಚೇರಿಯಲ್ಲಿ ಮಧ್ಯಾಹ್ನ 1.40ಕ್ಕೆ ಚುನಾವಣೆ ನಡೆಯಲಿದ್ದು ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಇಲ್ಲದ ಕಾರಣಕ್ಕೆ ಚುನಾವಣೆ ಕುತೂಹಲ ಮೂಡಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts