More

    ಚುನಾವಣಾ ಸೋಲಿನಿಂದ ಧೃತಿಗೆಡುವುದು ಬೇಡ: ಬಿಜೆಪಿ ಪರಾಜಿತ ಅಭ್ಯರ್ಥಿ ಅಶೋಕ್ ಜಯರಾಂ ಹೇಳಿಕೆ

    ಮಂಡ್ಯ: ವಿಧಾನಸಭಾ ಚುನಾವಣೆಯಲ್ಲಿ ಎದುರಾದ ಸೋಲಿನಿಂದ ಧೃತಿಗೆಡುವುದು ಬೇಡ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಅಶೋಕ್ ಜಯರಾಂ ಹೇಳಿದರು.
    ನಗರದ ಬಿಜೆಪಿ ಕಚೇರಿಯಲ್ಲಿ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಆತ್ಮಾವಲೋಕನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೋಲನ್ನೆ ಗೆಲುವನ್ನಾಗಿ ಪರಿವರ್ತಿಸುವ ಶಕ್ತಿ ಕಾರ್ಯಕರ್ತರಲ್ಲಿದೆ. ಮುಂದಿನ ದಿನಗಳಲ್ಲಿ ಬರುವ ಸ್ಥಳೀಯ ಚುನಾವಣೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷವನ್ನು ಗೆಲ್ಲಿಸೋಣ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಮಹತ್ವ ನೀಡಿ ಸ್ಥಳೀಯ ಚುನಾವಣೆಯಲ್ಲಿ ಗೆಲ್ಲೋಣ ಎಂದು ವಿಶ್ವಾಸ ತುಂಬಿದರು.
    ಕಾಂಗ್ರೆಸ್ ನೀಡಿದ ಭರವಸೆಗೆ ಜನರು ಮತ ನೀಡಿದ್ದಾರೆ. ಆದರೆ ಅವರು ಘೋಷಣೆ ಮಾಡಿರುವ ಯೋಜನೆ ಏನಾಗಲಿದೆ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ. ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡುವುದರ ಜತೆಗೆ ವಿರೋಧಿ ಅಲೆಗಳನ್ನು ಮತಗಳಾಗಿ ಪರಿವರ್ತಿಸುವ ಸಾಮರ್ಥ್ಯವನ್ನು ಪಡೆದುಕೊಳ್ಳೋಣ. ರಾಜ್ಯಮಟ್ಟದ ಸಲಹೆ ಮತ್ತು ಮಾರ್ಗದರ್ಶನ ಪಡೆದು ಸಂಘಟನೆಗೆ ಸಿದ್ದರಾಗಬೇಕಿದೆ. ಮಂಡ್ಯ ವಿಧಾನಸಭಾ ಕ್ಷೇತ್ರದ ಜನತೆಯ ನಾಡಿಮಿಡಿತ ಮತ್ತು ಸ್ಥಳೀಯ ಸಮಸ್ಯೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದರು.
    ನಾವು ಕೂಡ ಬಿಜೆಪಿ ಕಾರ್ಯಕರ್ತರು ಆಯೋಜಿಸುವ ಸಭೆ ಸಮಾರಂಭಗಳಿಗೆ ಬರುತ್ತೇವೆ. ಕಾರ್ಯಕರ್ತರೊಡಗೂಡಿ ಸ್ಥಳೀಯ ಸಮಸ್ಯೆಗಳಿಗೆ ಹೋರಾಟ ಮಾಡಿ ಪರಿಹಾರ ಕಂಡುಕೊಳ್ಳಬೇಕಿದೆ. ಮುಂದಿನ ದಿನದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪ್ರತಿ ಕ್ಷೇತ್ರದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲುವಿಗಾಗಿ ಸಂಕಲ್ಪ ಮಾಡುವುದು ಸೂಕ್ತ. ಅದರಂತೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಹೊಸ ಅಲೆಯನ್ನೆ ಎಬ್ಬಿಸೋಣ ಎಂದು ಹೇಳಿದರು.
    ಸಭೆಯಲ್ಲಿ ಬಿಜೆಪಿ ನಗರ ಮೋರ್ಚಾ ಅಧ್ಯಕ್ಷ ವಿವೇಕ್, ನಗರಸಭಾ ಸದಸ್ಯ ಅರುಣ್‌ಕುಮಾರ್, ಮಂಡ್ಯ ಗ್ರಾಮಾಂತರ ಅಧ್ಯಕ್ಷೆ ಸುಜಾತಾ, ಜಿಲ್ಲಾ ಒಬಿಸಿ ಅಧ್ಯಕ್ಷ ರಮೇಶ್ ವಿಶ್ವಕರ್ಮ, ನಗರಸಭಾ ನಾಮನಿರ್ದೇಶಿತ ಸದಸ್ಯರಾದ ಪ್ರಸನ್ನ, ಚಂದ್ರು, ಮುಖಂಡರಾದ ಕಾರಸವಾಡಿ ಮಹದೇವು, ಬೇಲೂರು ಸೋಮಶೇಖರ್, ಅರವಿಂದ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts