More

    ಮತದಾನದ ದಿನ ಕೋಚ್ ಬೆಹರ್‌ಗೆ ತೆರಳದಂತೆ ರಾಜ್ಯಪಾಲರಿಗೆ ಇಸಿ ಸಲಹೆ!

    ಕೋಲ್ಕತ್ತಾ: ಲೋಕಸಭಾ ಚುನಾವಣೆಯ ಮತದಾನದ ದಿನದಂದು ಕೋಚ್‌ ಬೆಹರ್‌ ಜಿಲ್ಲೆಗೆ ತೆರಳದಂತೆ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ ವಿ ಆನಂದ್‌ ಬೋಸ್‌ ಅವರಿಗೆ ಚುನಾವಣಾ ಆಯೋಗವು ಮನವಿ ಮಾಡಿದೆ.

    ಇದನ್ನೂ ಓದಿ: ಲೋಕಸಭೆ ಚುನಾವಣೆ ಕಣದಿಂದ ಹಿಂದೆ ಸರಿದ ಗುಲಾಂ ನಬಿ ಆಜಾದ್! ಕಾರಣ ಹೀಗಿದೆ..? 

    ಕೋಚ್‌ ಬೆಹರ್‌ ಲೋಕಸಭಾ ಕ್ಷೇತ್ರದಲ್ಲಿ ಏ.19ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಏ.18 ಹಾಗೂ ಏ.19ರಂದು ಅಲ್ಲಿನ ಪ್ರದೇಶಕ್ಕೆ ತೆರಳದಂತೆ ಸಲಹೆ ನೀಡಿದೆ.

    ವರದಿಯ ಪ್ರಕಾರ ರಾಜ್ಯಪಾಲರ ಉದ್ದೇಶಿತ ಪ್ರವಾಸವು ಮಾದರಿ ನೀತಿ ಸಂಹಿತೆಯ ಹಿಂಸಾತ್ಮಕ ಪ್ರದೇಶವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
    ಮೊದಲ ಹಂತ ಮತದಾನ ನಡೆಯುವ ಹಿನ್ನೆಲೆಯಲ್ಲಿ ಬುಧವಾರ ಸಂಜೆಯಿಂದ 48 ಗಂಟೆಗಳ ಕಾಲ ಮೌನದ ಅವಧಿಯಾಗಿರುತ್ತದೆ. ಮೌನದ ಅವಧಿಯಲ್ಲಿ ಮತದಾನ ನಡೆಯುವುದಕ್ಕೂ ಮುನ್ನ ರಾಜಕೀಯ ಪಕ್ಷಗಳಿಗೆ ಪ್ರಚಾರಗಳನ್ನು ನಿಷೇಧಿಸಲಾಗಿರುತ್ತದೆ.

    ರಾಜ್ಯಪಾಲರ ಕಚೇರಿಗೆ ಕಳುಹಿಸಿರುವ ಪತ್ರದಲ್ಲಿ ಚುನಾವಣಾ ನೀತಿ ಸಂಹಿತೆ ಪ್ರಕಾರ ರಾಜ್ಯಪಾಲರು ಯಾವುದೇ ಸ್ಥಳೀಯ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಏಪ್ರಿಲ್ 18 ಮತ್ತು 19 ರಂದು ಇಡೀ ಜಿಲ್ಲಾಡಳಿತ ಮತ್ತು ಪೊಲೀಸ್ ಸಿಬ್ಬಂದಿ ಚುನಾವಣಾ ಕರ್ತವ್ಯದಲ್ಲಿ ಇರುತ್ತಾರೆ ಎಂದು ಹೇಳಿದೆ.

    ಪಶ್ಚಿಮ ಬಂಗಾಳದ ಒಟ್ಟು 42 ಲೋಕಸಭಾ ಕ್ಷೇತ್ರಗಳಿಗೆ ಏ.19 ರಿಂದ ಜೂನ್ 1ರವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.
    2024 ರ ಲೋಕಸಭಾ ಚುನಾವಣೆಯು ಏಪ್ರಿಲ್ ನಿಂದ ಜೂನ್ ವರೆಗೆ ಏಳು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ಮತ್ತು ಏಳನೇ ಹಂತ ಜೂನ್ 1 ರಂದು ನಡೆಯಲಿದೆ. ಮತಗಳ ಎಣಿಕೆ ಜೂನ್ 4 ರಂದು ನಡೆಯಲಿದೆ.

    ಶ್ರೀರಾಮನವಮಿ ಆಚರಿಸಿ ಹೋಗುತ್ತಿದ್ದವರನ್ನ ಅಡ್ಡಗಟ್ಟಿ ಅನ್ಯಕೋಮಿನ ಯುವಕರಿಂದ ಬೆದರಿಕೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts