More

    ಸೌಲಭ್ಯ ನೀಡದಿದ್ದರೆ ಚುನಾವಣೆ ಬಹಿಷ್ಕಾರ

    ಹನೂರು : ತಾಲೂಕಿನ ಡಿ.ಎಂ. ಸಮುದ್ರ ಗ್ರಾಮ ಘಟಕ ವ್ಯಾಪ್ತಿಯ ಗ್ರಾಮಗಳಲ್ಲಿನ ವಿವಿಧ ಸಮಸ್ಯೆಗಳನ್ನು ಬಗೆಹರಿಸಬೇಕು, ಇಲ್ಲವಾದಲ್ಲಿ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸಲು ರೈತ ಸಂಘದ ಗ್ರಾಮ ಘಟಕದ ಪದಾಧಿಕಾರಿಗಳು ನಿರ್ಧರಿಸಿದ್ದಾರೆ.

    ಡಿ.ಎಂ. ಸಮುದ್ರ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ರೈತ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಮಾಡಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವ ತನಕ ಬೆಳಗಿನ ಸಮಯದಲ್ಲಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

    ಈ ವೇಳೆ ರೈತರು ಮಾತನಾಡಿ, ಇದೀಗ ಬೇಸಿಗೆ ಆಗಮಿಸಿರುವುದರಿಂದ ಕೃಷಿ ಮಾಡಲು ನೀರಿನ ಸಮಸ್ಯೆ ಎದುರಾಗಿದೆ. ಆದ್ದರಿಂದ ಹುಬ್ಬೆಹುಣಸೆ ಹಾಗೂ ಉಡುತೊರೆ ಜಲಾಶಯದಿಂದ ಹಳ್ಳಗಳಿಗೆ ನೀರು ಹರಿಸಬೇಕು. ಅಲ್ಲಲ್ಲಿ ಚೆಕ್‌ಡ್ಯಾಂಗಳನ್ನು ನಿರ್ಮಿಸಬೇಕು. ಜತೆಗೆ ಜಾನುವಾರುಗಳಿಗೆ ನೀರು ಹಾಗೂ ಮೇವನ್ನು ಒದಗಿಸಬೇಕು. ರೈತರಿಗೆ ಬ್ಯಾಂಕಿನಿಂದ ಸಾಲ ಸೌಲಭ್ಯ ಕೊಡಿಸಬೇಕು. ಇನ್ನು ಡಿ.ಎಂ. ಸಮುದ್ರ ಗ್ರಾಮದ ಸರ್ವೇ ನಂ. 75 ರಲ್ಲಿ ನೂರಾರು ರೈತರು ಕೃಷಿ ಮಾಡುತ್ತಿದ್ದಾರೆ. ಆದರೆ ಆರ್‌ಟಿಸಿ ನೀಡಿಲ್ಲ. ಇದರಿಂದ ಸರ್ಕಾರದಿಂದ ಸವಲತ್ತುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಕೆಲವು ಜಮೀನುಗಳಿಗೆ ತೆರಳಲು ನಕ್ಷೆಯಂತೆ ತಿರುಗಾಡಲು ದಾರಿ ಇದೆ. ಆದರೆ ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಹಾಗಾಗಿ ತೆರವುಗೊಳಿಸುವುದರ ಮೂಲಕ ಸಂಚರಿಸಲು ಅನುಕೂಲ ಕಲ್ಪಿಸಬೇಕು. ಇತ್ತ ಗ್ರಾಮದಲ್ಲಿ ಸುಮಾರು 400 ಕುಟುಂಬಗಳಿವೆ. ಆದರೆ ಸ್ಮಶಾನವಿಲ್ಲ. ಇದರಿಂದ ಜಮೀನು ಇಲ್ಲವೇ ಗ್ರಾಮದ ಹೊರವಲಯದಲ್ಲಿ ಅಂತ್ಯ ಸಂಸ್ಕಾರ ನಡೆಸಬೇಕಾದ ಸ್ಥಿತಿ ಇದೆ. ಆದ್ದರಿಂದ ಗ್ರಾಮಕ್ಕೆ ಸ್ಮಶಾನ ವ್ಯವಸ್ಥೆ ಕಲ್ಪಿಸಬೇಕು. ಜತೆಗೆ ಈ ಭಾಗದಲ್ಲಿ ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಯನ್ನು ಅಭಿವೃದ್ಧಿ ಪಡಿಸಬೇಕು. ಇಲ್ಲವಾದಲ್ಲಿ ಮುಂಬರುವ ಲೋಕಸಭೆಯನ್ನು ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿದರು.

    ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್, ತಾಲೂಕು ಅಧ್ಯಕ್ಷ ಚಂಗಡಿ ಕರಿಯಪ್ಪ, ಗ್ರಾಮ ಘಟಕದ ಅಧ್ಯಕ್ಷ ಮೈಕಲ್, ಕಾರ್ಯದರ್ಶಿ ಭೈರನತ್ತ ರಾಜು, ರೈತ ಮುಖಂಡರಾದ ಶ್ರೀನಿವಾಸ್, ಗಿರಿಮಲ್ಲಯ್ಯ, ಕುಳ್ಳಪ್ಪ, ಸೋಮಣ್ಣ, ದಯಾನಂದ ಪ್ರಭು ಹಾಗೂ ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts