More

    ರಾಜ್ಯ ಸರ್ಕಾರದ ಖಜಾನೆ ಖಾಲಿ

    ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
    ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ 10 ತಿಂಗಳಲ್ಲಿ ಸರ್ಕಾರದ ಖಜಾನೆ ಖಾಲಿಯಾಗಿದೆ. ಇದರಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಲು ಸರ್ಕಾರದ ಬಳಿ ಹಣವೇ ಇಲ್ಲದಂತಾಗಿದೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿದರು.
    ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಹೊಸಕೋಟೆ ಟೌನ್ ಶ್ರೀವಾರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ನಾರಿ ಶಕ್ತಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ 10 ತಿಂಗಳಾದರೂ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿಲ್ಲ, ಬಹುತೇಕ ಲಾನುಭವಿಗಳಿಗೆ ಇಂದಿಗೂ ಯೋಜನೆಗಳು ತಲುಪಿಲ್ಲ ಎಂದರು. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಜನರಿಂದ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ. ಅಗತ್ಯ ವಸ್ತುಗಳು ಸೇರಿ ಸಿಕ್ಕಸಿಕ್ಕ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರನ್ನು ಸುಲಿಗೆ ಮಾಡುತ್ತಿದೆ. ಇಂಥ ಸರ್ಕಾರಗಳಿಂದ ಮತ್ಯಾವುದೇ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವಿಲ್ಲ. ಇವೆಲ್ಲ ಗ್ಯಾರಂಟಿಗಳಿಗಿಂತ ಮೋದಿ ಗ್ಯಾರಂಟಿಯೇ ವಿಶ್ವಾಸಾರ್ಹವಾಗಿದೆ ಎಂದು ಎಂಟಿಬಿ ನಾಗರಾಜ್ ಹೇಳಿದರು. ಲೋಕಸಭಾ ಚುನಾವಣೆ ದೇಶದ ಭವಿಷ್ಯದ ಚುನಾವಣೆಯಾಗಿದೆ. ಆದ್ದರಿಂದ ಮತದಾರರು ಎಚ್ಚರಿಕೆಯಿಂದ ಮುಂದಿನ ಭವಿಷ್ಯದ ದೃಷ್ಟಿಯಿಂದ ಸಮರ್ಥ ನಾಯಕನನ್ನು ಆಯ್ಕೆ ಮಾಡಬೇಕು ಎಂದು ಎಂಟಿಬಿ ನಾಗರಾಜ್ ಕರೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts