

ಮಂಗಳೂರು : ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಯುವ ನಾಯಕ ಕಿಶೋರ್ ಕುಮಾರ್ ಪುತ್ತೂರು ಕಣದಲ್ಲಿದ್ದು ಅವರ ಗೆಲುವು ನಿಶ್ಚಿತವಾಗಿದೆ ಹೋರಾಟದ ಹಿನ್ನೆಲೆಯಿಂದ ಬಂದ ಕಿಶೋರ್ ಕುಮಾರ್ ಸಮಸ್ಯೆಗಳಿಗೆ ಸಮರ್ಥ ಧ್ವನಿಯಾಗಬಲ್ಲವರಾಗಿದ್ದಾರೆ. ಅವರನ್ನು ಅಭೂತಪೂರ್ವ ಅಂತರದಲ್ಲಿ ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು.
ವಿಧಾನ ಪರಿಷತ್ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರ ಉಪ ಚುನಾವಣೆಯ ಹಿನ್ನೆಲೆಯಲ್ಲಿ ನಡೆದ ಮಂಗಳೂರು ವಿಧಾನಸಭಾ ಕ್ಷೇತ್ರದ ಕೋಟೆಕಾರು ಪಟ್ಟಣ ಪಂಚಾಯಿತಿ, ಮುನ್ನೂರು , ತಲಪಾಡಿ ಹಾಗೂ ಗ್ರಾಮ ಪಂಚಾಯಿತಿಗಳ ಬಿಜೆಪಿ ಸದಸ್ಯರ ಹಾಗೂ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.
ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಗಳೂರು ಮಂಡಲ ಸಮಿತಿ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲು ಮುಂತಾದವರು ಉಪಸ್ಥಿತರಿದ್ದರು.