ಮಂಡ್ಯ ಕ್ಷೇತ್ರದಲ್ಲಿ ಪ್ರಚಾರ ಬಿರುಸು

Latest News

ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​​ ಸ್ಮರಣೀಯವಾಗಿಸಲು ಕೋಲ್ಕತದ ಪ್ರಮುಖ ಕಟ್ಟಡಗಳಲ್ಲಿ ರಾರಾಜಿಸುತ್ತಿವೆ 3D ಮ್ಯಾಪಿಂಗ್​!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​​​ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಆತಿಥೇಯ ಭಾರತ ಮತ್ತು ಪ್ರವಾಸಿ ಬಾಂಗ್ಲಾದೇಶ ಚೊಚ್ಚಲ ಹಗಲು-ಇರುಳು ಟೆಸ್ಟ್​ ಪಂದ್ಯವನ್ನು...

ಅಂದಿನ ಮಂಡ್ಯದ ಸ್ವಾಭಿಮಾನದ ಕಹಳೆ ಇಂದು ಕೆ.ಆರ್​.ಪೇಟೆಗೆ ಶಿಫ್ಟ್​!

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮೊಳಗಿದ್ದ ಕಹಳೆ ಧ್ವನಿ ಜಿಲ್ಲೆಯಲ್ಲಿ ಮತ್ತೆ ಮೊಳಗಲಿದೆ. ಉಪ ಚುನಾವಣೆಯಲ್ಲಿ ಕೆ.ಆರ್.ಪೇಟೆ ಪಕ್ಷೇತರ ಅಭ್ಯರ್ಥಿ ಸರ್ವೇ ದೇವೇಗೌಡಗೆ ಚುನಾವಣಾ ಆಯೊಗ...

ಅನಾಮಧೇಯ ಕರೆಯಿಂದ ನಿಂತ ಮದುವೆ; ಬೇರೊಬ್ಬ ಹುಡುಗನ ಜತೆ ನಿಶ್ಚಯ

ರಾಮನಗರ: ವಧುವಿಗೆ ಬಂದ ಅನಾಮಧೇಯ ಪೋನ್​ಕಾಲ್​ನಿಂದ ಮುರಿದು ಬಿದ್ದ ಮದುವೆ, ಬೇರೊಬ್ಬ ಹುಡುಗನ ಜತೆ ನಿಶ್ಚಯವಾಗುವ ಮೂಲಕ ಸುಖಾಂತ್ಯಗೊಂಡಿದೆ. ಮದುವೆ ನಿಶ್ಚಯವಾಗಿದ್ದ ಗಂಡಿಗೆ ಮೊದಲೇ...

ಮೈದಾನ ಯಾವುದೇ ಇರಲಿ, ಬಾಲ್ ಯಾವುದೇ ಆಗಲಿ​ ಶಮಿ ತುಂಬಾ ಡೇಂಜರಸ್​ ಎಂದ ಆಟಗಾರನ್ಯಾರು?

ಕೋಲ್ಕತ: ಮೊದಲ ಬಾರಿಗೆ ಅಹರ್ನಿಶಿ ಟೆಸ್ಟ್​ ಪಂದ್ಯವನ್ನಾಡಲು ಟೀಮ್​​ ಇಂಡಿಯಾ ತುದಿಗಾಲಲ್ಲಿ ನಿಂತಿದೆ. ಇಂದು ಆರಂಭವಾಗಲಿರುವ ಪಂದ್ಯಕ್ಕೆ ಅನೇಕ ಗಣ್ಯರು ಸಾಕ್ಷಿಯಾಗಲಿದ್ದಾರೆ. ಇದರ...

ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ: ಸ್ಥಳೀಯ ಪೊಲೀಸರಿಗೆ ಕೇಂದ್ರ ಗುಪ್ತದಳ ಸಾಥ್​

ಮೈಸೂರು: ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ ದಿನದಿನಕ್ಕೂ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಕೊಲೆ ಪ್ರಕರಣ ಸಂಬಂಧ ಮೈಸೂರು ಪೊಲೀಸರ ತನಿಖೆಗೆ...

ಮಂಡ್ಯ: ಬಹಿರಂಗ ಪ್ರಚಾರಕ್ಕೆ ಇನ್ನೆರಡು ದಿನ ಬಾಕಿ ಉಳಿದಿದ್ದು, ಕೊನೇ ಹಂತದ ಕಸರತ್ತು ಜೋರಾಗಿ ನಡೆಯುತ್ತಿದೆ. ಪ್ರಚಾರ ಆರಂಭಿಸಿದ ದಿನದಿಂದ ಒಂದು ದಿನವೂ ವಿಶ್ರಾಂತಿ ಪಡೆಯದೆ ಕ್ಷೇತ್ರ ಸುತ್ತುತ್ತಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಭಾನುವಾರ ಮಳವಳ್ಳಿ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಮತ ಯಾಚಿಸಿದರು.

ಸುಮಲತಾ ಅಂಬರೀಷ್ ಹೋದೆಡೆ ಹಲವು ಮಹಿಳೆಯರು ಮಡಿಲಕ್ಕಿ ಜತೆಗೆ ದೇಣಿಗೆಯನ್ನೂ ನೀಡಿ ಶುಭ ಹಾರೈಸಿದರು. ಸುಮಲತಾ ಪರ ಮದ್ದೂರು ಹಾಗೂ ಮಳವಳ್ಳಿ ಕ್ಷೇತ್ರದಲ್ಲಿ ದರ್ಶನ್ ರೋಡ್ ಶೋ ನಡೆಸಿದರೆ, ಕೆ.ಆರ್.ಪೇಟೆ ತಾಲೂಕಿನಲ್ಲಿ ಯಶ್, ನಾಗಮಂಗಲದಲ್ಲಿ ಅಭಿಷೇಕ್ ಅಂಬರೀಷ್ ಪ್ರಚಾರ ಮಾಡಿದರು. ಜೆಡಿಎಸ್ ಅಭ್ಯರ್ಥಿ ನಿಖಿಲ್ ಮಂಡ್ಯ ಹಾಗೂ ಶ್ರೀರಂಗಪಟ್ಟಣ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಪ್ರಚಾರ ನಡೆಸಿದರೆ, ಅನಿತಾ ಕುಮಾರಸ್ವಾಮಿ ಶ್ರೀರಂಗಪಟ್ಟಣ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ತೆರಳಿ ಮತಬೇಟೆ ಮಾಡಿದರು. ಪ್ರಚಾರಕ್ಕೆ ಹೋದ ಎಲ್ಲೆಡೆ ಇಬ್ಬರು ಅಭ್ಯರ್ಥಿಗಳ ಬೆಂಬಲಿಗರು ಪಟಾಕಿ ಸಿಡಿಸಿ, ಹಾರ ತುರಾಯಿ, ಹೂವಿನ ಮಳೆ ಮೂಲಕ ವಿಜೃಂಭಣೆಯಿಂದ ಸ್ವಾಗತಿಸಿ, ಬೆಂಬಲ ವ್ಯಕ್ತಪಡಿಸಿದರು.

ಲಕ್ಷ ರೂ. ದೇಣಿಗೆ: ಬೆಳಕವಾಡಿ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ರೋಡ್ ಶೋ ಮೂಲಕ ಸುಮಲತಾ ಅಂಬರೀಷ್ ಮತ ಯಾಚಿಸಿದರು. ಕಗ್ಗಲೀಪುರದಲ್ಲಿ ಸುಮಲತಾ ಅಂಬರೀಷ್​ಗೆ ಗ್ರಾಪಂ ಮಾಜಿ ಅಧ್ಯಕ್ಷ ಎಂ.ಪರಶಿವಮೂರ್ತಿ, ಮುಖಂಡರಾದ ವೃಷಭೇಂದ್ರ, ಮೋಹನ್, ಗೌಡರ ವೀರಣ್ಣ ನೇತೃತ್ವದಲ್ಲಿ 1,00,000 ರೂ. ಸಂಗ್ರಹಿಸಿ, ಅರಿಶಿಣ-ಕುಂಕುಮ, ತಾಂಬೂಲ ಸೇರಿಸಿ ನೀಡಿದ ಮಹಿಳೆಯರು, ಯುವಕರು, ಜಿಲ್ಲೆಯ ಸ್ವಾಭಿಮಾನಿ ಸೊಸೆಗೆ ಜಯವಾಗಲಿ ಎಂದು ಆಶಿಸಿದರು.

ದರ್ಶನ್ ಪ್ರಚಾರ ಮೊಟಕು

ಮದ್ದೂರು ತಾಲೂಕಿನ ವಿವಿಧೆಡೆ ಪ್ರಚಾರ ಮಾಡಿದ ಚಿತ್ರನಟ ದರ್ಶನ್, ಕದಲೂರು ಗ್ರಾಮಕ್ಕೆ ಬರುವ ವೇಳೆಗೆ ಕೈ ನೋವು ತೀವ್ರಗೊಂಡಿದ್ದರಿಂದ ಮೊಟಕುಗೊಳಿಸಿ ಹುಲಿಯೂರು ದುರ್ಗಕ್ಕೆ ತೆರಳಿ ಕೆಲಕಾಲ ವಿಶ್ರಾಂತಿ ಪಡೆದರು. ಅಲ್ಲಿಂದ ಮೈಸೂರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರು. ಸ್ವಲ್ಪ ಚೇತರಿಸಿಕೊಂಡ ನಂತರ ಅವರು ಸಂಜೆ ಹಲಗೂರು ವ್ಯಾಪ್ತಿಯಲ್ಲಿ ಮತಯಾಚಿಸಿದರು.

ನಿಖಲ್ ಎಲ್ಲಿದೀಯಪ್ಪಾ ಎಂದು ಜಾಲತಾಣಗಳಲ್ಲಿ ಕೇಳುತ್ತಿದ್ದಾರೆ. ಇವರಿಗೆಲ್ಲ, ‘ನಿಖಿಲ್ ನಮ್ಮ ಹೃದಯದಲ್ಲಿದ್ದಾನೆ’ ಎಂದು ಹೇಳಿ. ನಿಖಿಲ್​ನನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸುವ ಮೂಲಕ ಟೀಕಾಕಾರರಿಗೆ ಉತ್ತರ ಕೊಡಿ.

| ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

- Advertisement -

Stay connected

278,656FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...