ಸಿನಿಮಾ

ಮೂಲ ಸೌಕರ್ಯ ಒದಗಿಸಲು ಒತ್ತು: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಮಧುಚಂದನ್ ಭರವಸೆ

ಮಂಡ್ಯ: ದೊಡ್ಡಹಳ್ಳಿಯಂತಿರುವ ಮಂಡ್ಯ ಜಿಲ್ಲಾ ಕೇಂದ್ರದ ಹಲವು ಸಮಸ್ಯೆಗಳಿಂದ ಬಳಲುತ್ತಿದೆ. ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಒತ್ತು ನೀಡಲಾಗುವುದು ಎಂದು ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಎಸ್.ಸಿ.ಮಧುಚಂದನ್ ಭರವಸೆ ನೀಡಿದರು.
ತಾಲೂಕಿನ ಆನಸೊಸಲು, ಚಿಕ್ಕಬಳ್ಳಿ, ನಲ್ಲಹಳ್ಳಿ, ಚಿಕ್ಕಬಾಣಸವಾಡಿ, ದೊಡ್ಡಬಾಣಸವಾಡಿ ಗ್ರಾಮದಲ್ಲಿ ಮತಯಾಚನೆ ಮಾಡಿದ ಅವರು, ಇಂದಿಗೂ ಜನರು ಮೂಲ ಸೌಕರ್ಯದಿಂದ ವಂಚಿತರಾಗಿದ್ದಾರೆ. ಈವರೆಗೆ ಆಯ್ಕೆಯಾಗಿರುವ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ನಿರ್ಲಕ್ಷೃ ತೋರಿದ ಪರಿಣಾಮ ಜನರು ಸಮಸ್ಯೆ ಎದುರಿಸುವಂತಾಗಿದೆ ಎಂದು ಆಕ್ರೋಶ ಹೊರಹಾಕಿದರು.
ಜಿಲ್ಲಾ ಕೇಂದ್ರದಲ್ಲಿ ಅಗತ್ಯ ಸೌಲಭ್ಯವಿರುವ ಆಸ್ಪತ್ರೆ ಇಲ್ಲ. ಪ್ರತಿದಿನ ಸಾವಿರಾರೂ ರೋಗಿಗಳು ಆಸ್ಪತ್ರೆಗೆ ಬಂದರೂ ಎಲ್ಲ ರೀತಿಯ ಚಿಕಿತ್ಸೆ ಸಿಗದಂತಾಗಿದೆ. ಇನ್ನು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕಾದರೆ ವರ್ಷಕ್ಕೆ ಲಕ್ಷಾಂತರ ರೂ ಖರ್ಚು ಮಾಡಬೇಕಿದೆ. ಸರ್ಕಾರಿ ಶಾಲೆಯಲ್ಲಿಯೇ ಸೌಲಭ್ಯ ಇದ್ದಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಆದ್ದರಿಂದ ಒಮ್ಮೆ ಅವಕಾಶ ಕೊಡಿ ಮಂಡ್ಯ ಕ್ಷೇತ್ರವನ್ನು ಮಾದರಿಯನ್ನಾಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತೇನೆ ಎಂದು ಮನವಿ ಮಾಡಿದರು.
ಆನಸೊಸಲು ದೇವೇಗೌಡ, ದ್ಯಾವಪ್ಪ, ಕಿಶೋರ, ಸಾಗರ್, ಅಶೋಕ್, ಪವನ್ ಇತರರಿದ್ದರು.

Latest Posts

ಲೈಫ್‌ಸ್ಟೈಲ್