More

    ಚುನಾವಣೆ ಬಹಿಷ್ಕಾರ ನಿರ್ಧಾರ ಕೈ ಬಿಡಿ

    ಚಿಕ್ಕಮಗಳೂರು: ಪರಿಸರ ಸೂಕ್ಷ್ಮವಲಯವನ್ನು ಭದ್ರಾ ನದಿ ವ್ಯಾಪ್ತಿವರೆಗೆ ಸೀಮಿತಗೊಳಿಸಬೇಕೆಂಬ ರೈತರ ಬೇಡಿಕೆಗೆ ಕೇಂದ್ರ ಸರ್ಕಾರ ಬದ್ಧವಿದ್ದು, ಗ್ರಾಪಂ ಚುನಾವಣೆ ಬಹಿಷ್ಕಾರ ನಿರ್ಧಾರ ಕೈಬಿಡಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಮನವಿ ಮಾಡಿದರು.

    ರಾಜ್ಯ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ನೂರಿನ್ನೂರು ಮೀಟರ್​ಗಳಷ್ಟು ವ್ಯಾಪ್ತಿಯನ್ನು ಮಾತ್ರ ಬಫರ್ ಜೋನ್ ಎಂದು ಘೊಷಿಸಲಾಗಿದೆ. ನಮ್ಮಲ್ಲಿ ಭದ್ರಾ ನದಿಯ ವ್ಯಾಪ್ತಿಗೆ ಬಫರ್ ಜೋನ್ ಸೀಮಿತವಾಗಬೇಕೆಂಬ ಬೇಡಿಕೆ ಇದ್ದು, ಇದಕ್ಕೆ ಪೂರಕವಾಗಿ ಕೇಂದ್ರದ ಮೇಲೆ ಒತ್ತಡ ತರಲಾಗಿದೆ. ರಾಜ್ಯ ಸರ್ಕಾರ ಸಹ ಕೇಂದ್ರ ಪರಿಸರ ಇಲಾಖೆಗೆ ಪತ್ರ ಬರೆದಿದ್ದು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಸ್ಪಂದಿಸಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಕೋರಲಾಗಿದೆ. ಸುಪ್ರೀಂ ಕೋರ್ಟ್​ಗೆ ಮನವರಿಕೆ ಮಾಡಿಕೊಡುವ ಜವಾಬ್ದಾರಿ ಈಗ ಎಲ್ಲ ರಾಜ್ಯಗಳದ್ದೂ ಆಗಿದೆ. ಅಷ್ಟಕ್ಕೂ ಗ್ರಾಪಂ ಚುನಾವಣೆ ಬಹಿಷ್ಕರಿಸುವುದರಿಂದ ಇದಕ್ಕೆ ಪರಿಹಾರ ಸಿಗದು. ಚುನಾವಣೆಯಲ್ಲಿ ಪಾಲ್ಗೊಳ್ಳುವುದು ನಮ್ಮ ಹಕ್ಕು. ಉತ್ತಮರನ್ನು ಆಯ್ಕೆ ಮಾಡಿಕೊಳ್ಳಬೇಕು. ಅದಕ್ಕೆ ಬದಲಾಗಿ ಆಡಳಿತಾಧಿಕಾರಿಗಳನ್ನು ನೇಮಿಸುವುದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಸೂಕ್ತವಲ್ಲ. ಗ್ರಾಪಂಗಳಲ್ಲಿ ಚುನಾಯಿತ ಪ್ರತಿನಿಧಿಗಳಿದ್ದರೆ ಮಾತ್ರ ಹೋರಾಟಕ್ಕೆ ಇನ್ನಷ್ಟು ಧ್ವನಿ ಬರುತ್ತದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts