17.8 C
Bengaluru
Wednesday, January 22, 2020

6 ತಿಂಗಳೊಳಗೆ ಕ್ಷೇತ್ರದಲ್ಲಿ ಚುನಾವಣೆ

Latest News

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

ವಿಜಯವಾಣಿ ಸುದ್ದಿಜಾಲ ರಟ್ಟಿಹಳ್ಳಿ

ಹಿರೇಕೆರೂರು ತಾಲೂಕಿನಲ್ಲಿ ಮುಂದಿನ 6 ತಿಂಗಳ ಒಳಗಾಗಿ ವಿಧಾನಸಭೆ ಚುನಾವಣೆ ಜರುಗಲಿದೆ. ಬಿಜೆಪಿ ಸರ್ಕಾರ ಸಹ ಯಾವುದೇ ಸಮಯದಲ್ಲಾದರೂ ಪತನವಾಗುವ ಸಾಧ್ಯತೆ ಅಧಿಕವಾಗಿದೆ ಎಂದು ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ರಾಮನಗೌಡ ಪಾಟೀಲ ಹೇಳಿದರು.

ಪಟ್ಟಣದ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಜರುಗಿದ ಪಕ್ಷದ ತಾಲೂಕು ಘಟಕದ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರು ಸಂಘಟನೆಗೆ ಶ್ರಮಿಸಬೇಕು. ಹಿರೇಕೆರೂರು ಮತ್ತು ರಾಣೆಬೆನ್ನೂರ ತಾಲೂಕುಗಳ ಶಾಸಕ ಬಿ.ಸಿ. ಪಾಟೀಲ ಮತ್ತು ಆರ್. ಶಂಕರ ಅಧಿಕಾರದ ದಾಹ ಮತ್ತು ಸ್ವಾರ್ಥ ರಾಜಕಾರಣದಿಂದ ಸಮ್ಮಿಶ್ರ ಸರ್ಕಾರ ಪತನವಾಯಿತು. ಇದರಿಂದ ಹಾವೇರಿ ಜಿಲ್ಲೆಗೆ ಅವಮಾನವಾದಂತಾಗಿದೆ ಎಂದರು.

ಹಿರೇಕೆರೂರು ಕ್ಷೇತ್ರದಲ್ಲಿ ಮೊದಲು ಜೆಡಿಎಸ್ ಪಕ್ಷದಿಂದ ಆಯ್ಕೆಯಾಗಿದ್ದ ಬಿ.ಸಿ. ಪಾಟೀಲ ಕಾಂಗ್ರೆಸ್ ಪಕ್ಷಕ್ಕೆ ಮತ್ತು ಈಗ ಬಿಜೆಪಿ ಪಕ್ಷಕ್ಕೆ ಮಣೆ ಹಾಕಿದ್ದಾರೆ. ತಾಲೂಕಿನ ಜನತೆ ಅವರಿಗೆ ತಕ್ಕ ಪಾಠ ಕಲಿಸಬೇಕು. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಅವರನ್ನು ಪಕ್ಷದಿಂದ ಅತಿ ಹೆಚ್ಚು ಮತಗಳ ಅಂತರದಿಂದ ಜಯಶಾಲಿಯನ್ನಾಗಿಸಬೇಕು ಎಂದು ಹೇಳಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಜಿನಪ್ಪ ಕೋಡಿಹಳ್ಳಿ ಮಾತನಾಡಿದರು. ತಾಲೂಕಾಧ್ಯಕ್ಷ ಆರ್.ಎನ್. ಡಮ್ಮಳ್ಳಿ ಅಧ್ಯಕ್ಷತೆ ವಹಿಸಿದ್ದರು.

ಪಕ್ಷದ ರಾಜ್ಯ ಕಮಿಟಿ ಸದಸ್ಯ ಎಸ್.ಆರ್. ದೊಡ್ಡಬಸಪ್ಪನವರ, ಸಿದ್ದೇಶ ಕಾಗಿನೆಲ್ಲಿ, ಶಮಷಾರ ಕುಪ್ಪೇಲೂರ, ಹಜರತ್ ಸುಡಂಬಿ, ಸಿದ್ದನಗೌಡ ಗುಬ್ಬಿಯವರ, ಬಸನಗೌಡ ಪಾಟೀಲ, ಮಲ್ಲಪ್ಪ ಕೋಣನಕೆರೆ, ಸಲೀಂ ಸೋಮನಹಳ್ಳಿ, ಎಚ್.ಸಿ. ಕಡೇಮನಿ, ಶಿವಾನಂದ ಬಾತಮ್ಮನವರ, ಉಜ್ಜನಗೌಡ ನಡುವಿನಮನಿ, ಇತರರು ಇದ್ದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...