

ಗಂಗೊಳ್ಳಿ: ಪ್ರಜಾಪ್ರಭುತ್ವದ ರಾಷ್ಟ್ರದ ತಳಹದಿ ಗಟ್ಟಿಯಾಗಿರಬೇಕಿದ್ದರೆ ಚುನಾವಣಾ ಆಯೋಗ ಸದೃಢವಾಗಿರಬೇಕು. ಮತದಾನ ನಮ್ಮ ಹಕ್ಕು, ಮತಕ್ಕೆ ಬೇರೆ ಯಾವುದೇ ಸಾಟಿಯಿಲ್ಲ ಎಂದು ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಂ ಹುಸೇನ್ ಶೇಖ್ ಹೇಳಿದರು.
ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅಭಿಯೋಗ ಇಲಾಖೆ ಸಹಯೋಗದೊಂದಿಗೆ ಶನಿವಾರ ಕುಂದಾಪುರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಕುಂದಾಪುರ ಉಪವಿಭಾಗ ಸಹಾಯಕ ಆಯುಕ್ತ ಕೆ.ಮಹೇಶ್ಚಂದ್ರ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ರಾಜು ಎನ್., ಮತ್ತು ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶೆ ಮಂಜುಳಾ ಬಿ., ಕುಂದಾಪುರ ತಾಪಂ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಡಾ.ರವಿಕುಮಾರ್ ಹುಕ್ಕೇರಿ, ಕುಂದಾಪುರ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಎಚ್.ಡಿ.ಕುಲಕರ್ಣಿ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಆನಂದ ಜಿ., ಸಹಾಯಕ ಸರ್ಕಾರಿ ಅಭಿಯೋಜಕ ಉದಯ ಕುಮಾರ್ ಬಿ.ಎ., ಕುಂದಾಪುರ ವಕೀಲರ ಸಂಘ ಅಧ್ಯಕ್ಷ ಹಂದಟ್ಟು ಪ್ರಮೋದ ಹಂದೆ, ಪ್ರಧಾನ ಕಾರ್ಯದರ್ಶಿ ಗಿಳಿಯಾರು ಪ್ರಕಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು. ಕುಂದಾಪುರ ತಾಲೂಕು ತಹಸೀಲ್ದಾರ್ ಮಲ್ಲಿಕಾರ್ಜುನ್ ಸ್ವಾಗತಿಸಿದರು. ಆಶಾಲತಾ ಪ್ರಾರ್ಥಿಸಿದರು. ಉಪತಹಸೀಲ್ದಾರ್ ವಿನಯ್ ಕಾರ್ಯಕ್ರಮ ನಿರ್ವಹಿಸಿದರು.