More

    ಸಂಸತ್​ ಸ್ಥಾನದಿಂದ ರಾಹುಲ್​ ಗಾಂಧಿ ಅನರ್ಹ; ವಯನಾಡು​ ಲೋಕಸಭೆ ಕ್ಷೇತ್ರಕ್ಕೆ ಸದ್ಯಕ್ಕಿಲ್ಲ ಉಪಚುನಾವಣೆ

    ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್​ ಸದಸ್ಯತ್ವದಿಂದ ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿ ಅನರ್ಹಗೊಂಡಿದ್ದು ಅವರು ಪ್ರತಿನಿಧಿಸುವ ವಯನಾಡ್​ ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವ ಬಗ್ಗೆ ಚುನಾವಣಾ ಆಯೋಗದ ಮುಂದೆ ಯಾವುದೇ ಪ್ರಸ್ತಾಪವಿಲ್ಲ ಎಂದು ಆಯೋಗ ಹೇಳಿದೆ.

    ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ರಾಜೀವ್​ ಕುಮಾರ್​ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್​ ನ್ಯಾಯಾಲಯವು ರಾಹುಲ್​ ಗಾಂಧಿ ಅವರಿಗೆ 30 ದಿನಗಳ ಕಾಲಾವಕಾಶ ನೀಡಿದೆ. ನ್ಯಾಯಾಲಯದ ಮುಂದಿನ ಆದೇಶದವರೆಗೂ ಕಾಯುತ್ತೇವೆ ಆ ನಂತರ ಆಯೋಗ ತನ್ನ ನಿರ್ಧಾರವನ್ನ ತಿಳಿಸಲಿದೆ ಎಂದು ಹೇಳಿದ್ದಾರೆ.

    ವಯನಾಡು​ ಲೋಕಸಭೆ ಕ್ಷೇತ್ರ ತೆರವಾಗಿರುವ ಬಗ್ಗೆ ಮಾರ್ಚ್​ 23ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಕಾನೂನಿನ ಪ್ರಕಾರ ಸ್ಥಾನ ತೆರವಾದ ಆರು ತಿಂಗಳೊಳಗೆ ಉಪಚುನಾವಣೆ ನಡೆಸಬೇಕು ಎಂದು ತಿಳಿಸಿದ್ದಾರೆ.

    ಸಂಸತ್​ ಸ್ಥಾನದಿಂದ ರಾಹುಲ್​ ಗಾಂಧಿ ಅನರ್ಹ; ವಯನಾಡು​ ಲೋಕಸಭೆ ಕ್ಷೇತ್ರಕ್ಕೆ ಸದ್ಯಕ್ಕಿಲ್ಲ ಉಪಚುನಾವಣೆ

    ಇದನ್ನೂ ಓದಿ: ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ

    ಹಾಲಿ ಸದಸ್ಯರ ಅವಧಿಯೂ ಒಂದು ವರ್ಷಕ್ಕಿಂತ ಕಡಿಮೆ ಇದ್ದರೆ ಉಪಚುನಾವಣೆ ನಡೆಸುವಂತಿಲ್ಲ. ಆದರೆ, ವಯನಾಡ್​ ಲೋಕಸಭೆ ಸದಸ್ಯರ ಅವಧಿಯೂ ಇನ್ನು ಒಂದು ವರ್ಷಕ್ಕಿಂತ ಹೆಚ್ಚಿರುವ ಕಾರಣ ನ್ಯಾಯಾಲಯದ ಮುಂದಿನ ಆದೇಶವನ್ನು ಗಮನದಲ್ಲಿಟ್ಟುಕೊಂಡು ಉಪಚುನಾವಣೆ ಘೋಷಿಸಲಾಗುವುದು ಎಂದು ಮುಖ್ಯ ಚುನಾವಣಾ ಅಧಿಕಾರಿ ರಾಜೀವ್​ ಕುಮಾರ್​ ಸುದ್ಧಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮದ ಕುರಿತು ವ್ಯಂಗ್ಯವಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್​ ಗಾಂಧಿ ಆವರನ್ನು ಸೂರತ್​ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಲೋಕಸಭೆ ಕಾರ್ಯದರ್ಶಿ ಅವರನ್ನು ಸಂಸತ್​ ಸದಸ್ಯತ್ವದಿಂದ ಅನರ್ಹಗೊಳಿಸಿದ ಬೆನ್ನಲ್ಲೇ ವಯನಾಡು ಲೋಸಭೆ ಕ್ಷೇತ್ರ ತೆರವಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts