More

    ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಚುನಾವಣಾ ಆಯೋಗ ಕಾರ್ಯ ವೈಖರಿಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ

    ನವದೆಹಲಿ: ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ರೋಮಾಂಚಕ ಮತ್ತು ಭಾಗವಹಿಸಲು ಆಸಕ್ತಿದಾಯಕವನ್ನಾಗಿ ಮಾಡಿದ ಭಾರತದ ಚುನಾವಣಾ ಆಯೋಗವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

    ರಾಷ್ಟ್ರೀಯ ಮತದಾರರ ದಿನವಾದ ಇಂದು ಚುನಾವಣಾ ಆಯೋಗಕ್ಕೆ ಶುಭ ಕೋರಿ ಟ್ವೀಟ್​ ಮಾಡಿರುವ ಅವರು, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮತದಾರರಿಗೆ ಪ್ರೇರೇಪಿಸಬೇಕಿದೆ ಎಂದಿದ್ದಾರೆ.

    ಪ್ರತಿವರ್ಷ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತದೆ. ದಿನಾಚರಣೆಯಂದು ಚುನಾವಣೆಯಲ್ಲಿ ಭಾಗವಹಿಸುವಂತೆ ಪ್ರೆರೇಪಿಸುವುದು ಇದರ ಪ್ರಮುಖ ಉದ್ದೇಶ. ಚುನಾವಣಾ ಆಯೋಗವು ಗಣ ರಾಜ್ಯೋತ್ಸವದ ಮುನ್ನ ದಿನ 1950ರ ಜನವರಿ 25ರಂದು ಆರಂಭವಾಯಿತು.

    ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಟ್ವೀಟ್​ ಮಹತ್ವ ಪಡೆದುಕೊಂಡಿದೆ. ಫೆಬ್ರವರಿ 8ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಪಡೆಯಲು ಸೆಣಸಾಡುತ್ತಿದೆ. ಫೆಬ್ರವರಿ 11ರಂದು ಫಲಿತಾಂಶ ಹೊರಬೀಳಲಿದೆ. (ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts