More

    ರಾಷ್ಟ್ರೀಯ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ದಿಢೀರ್ ರಾಜೀನಾಮೆ

    ನವದೆಹಲಿ: ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿದ್ದು, ಯಾವ ಕ್ಷಣದಲ್ಲಿ ಬೇಕಾದರೂ ದಿನಾಂಕ ಘೋಷಿಸುವ ಸಾಧ್ಯತೆ ದಟ್ಟವಾಗಿದೆ. ಆದರೆ, ಅಚ್ಚರಿಯ ಬೆಳವಣಿಗೆ ಒಂದರಲ್ಲಿ ರಾಷ್ಟ್ರೀಯ ಚುನಾವಣಾ ಆಯೋಗದ ಆಯುಕ್ತರಾದ ಅರುಣ್ ಗೋಯೆಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಮುಂಬರುವ ಸಾರ್ವತ್ರಿಕ ಚುನಾವಣೆಗೆ ರಾಷ್ಟ್ರೀಯ ಚುನಾವಣಾ ಆಯೋಗವು ಮುಂದಿನ ವಾರ ದಿನಾಂಕ ಘೋಷಿಸುವ ಸಾಧ್ಯತೆ ದಟ್ಟವಾಗಿತ್ತು. ಆದರೆ, ದಿಢೀರ್​ ಎಂದು ಅರುಣ್​ ಗೋಯೆಲ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಶಾಕ್​ ನೀಡಿದ್ದು, ರಾಷ್ಟ್ರೀಯ ಚುನಾವಣಾ ಆಯೋಗದ ಎರಡು ಪ್ರಮುಖ ಹುದ್ದೆಗಳು ತೆರವಾಗಿದೆ.

    ಇದನ್ನೂ ಓದಿ: ಟೆಸ್ಟ್​​ ಕ್ರಿಕೆಟ್​ನಲ್ಲಿ ವಿಶ್ವದಾಖಲೆ ಬರೆದ ಜೇಮ್ಸ್​ ಆ್ಯಂಡರ್ಸನ್​

    1985ರ ಬ್ಯಾಚ್​ನ ಐಎಎಸ್​ ಅಧಿಕಾರಿಯಾಗಿರುವ ಗೋಯೆಲ್ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರನ್ನು ಸರ್ಕಾರ ಎಷ್ಟೇ ಮನವೊಲಿಸಿದರು ಆರೋಗ್ಯದ ಕಾರಣ ನೀಡಿ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅರುಣ್​ ಗೋಯೆಲ್​ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ವರದಿಯಾಗಿದೆ.

    2022ರಲ್ಲಿ ಸ್ವಯಂನಿವೃತ್ತಿ ಪಡೆದಿದ್ದ ಗೋಯೆಲ್​ ಅವರನ್ನು ಮರುದಿನ ರಾಷ್ಟ್ರೀಯ ಚುನಾವಣಾ ಆಯೋಗದ ಆಯುಕ್ತರನ್ನಾಗಿ ನೇಮಿಸಲಾಗಿತ್ತು. ಇವರ ನೇಮಕ ತೀವ್ರ ಚರ್ಚೆಗೆ ಗ್ರಾಸವಾಗಿತ್ತು ಮತ್ತು ಈ ವಿಚಾರವನ್ನು ಸುಪ್ರೀಂ ಕೋರ್ಟ್​ನಲ್ಲಿ ನೇಮಿಸಲಾಗಿತ್ತು. ವಿಆರ್​ಎಸ್​ ತೆಗೆದುಕೊಂಡ ಅಧಿಕಾರಿಯನ್ನು ಇಷ್ಟು ಆತುರವಾಗಿ ಯಾಕೆ ನೇಮಿಸಲಾಯಿತು ಎಂದು ನ್ಯಾಯಾಲಯ ಸರ್ಕಾರವನ್ನು ಪ್ರಶ್ನಿಸಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts