More

    ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಪಕ್ಷಾಂತರ; ಕಾಂಗ್ರೆಸ್, ಬಿಜೆಪಿಗೆ ಹೆಚ್ಚು ಸೇರ್ಪಡೆ, ಜೆಡಿಎಸ್‌ಗಿಲ್ಲ ಲಕ್

    ಬೆಂಗಳೂರು:
    ಚುನಾವಣೆ ಸಂದರ್ಭದಲ್ಲಿ ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಪಕ್ಷಾಂತರ ಮಾಡುವುದು ಮಾಮೂಲಿಯಾಗಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಈ ಪ್ರಮಾಣ ಹೆಚ್ಚಾಗಿದೆ.
    ಚುನಾವಣೆ ಸ್ಪರ್ಧೆ ಮಾಡಲು ಟಿಕೆಟ್ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮುನಿಸಿಕೊಂಡು ಪಕ್ಷಾಂತರ ಮಾಡುವುದು ಇಂದು ನಿನ್ನೆಯದಲ್ಲ. ದಶಕಗಳಿಂದಲೂ ಇದು ನಡೆಯುತ್ತಲೇ ಬಂದಿದೆ.
    ಈ ಬಾರಿ ಇಬ್ಬರು ಹಾಲಿ ಸಂಸದರು ಪಕ್ಷಾಂತರ ಮಾಡಿದ್ದರೆ, ಇನ್ನುಳಿದಂತೆ ಮಾಜಿ ಶಾಸಕರು, ಮಾಜಿ ಸಚಿವರು, ಮುಖಂಡರು ಪಕ್ಷ ಬದಲಿಯಿಸಿದ್ದಾರೆ.
    ಕಾಂಗ್ರೆಸ್ ಮತ್ತು ಬಿಜೆಪಿಗೆ ಹೆಚ್ಚು ಸೇರ್ಪಡೆಯಾಗಿದ್ದರೆ, ಜೆಡಿಎಸ್‌ಗೆ ಸೇರ್ಪಡೆಯಾದವರ ಸಂಖ್ಯೆ ಕಡಿಮೆ. ಜೆಡಿಎಸ್ ಕೆಲ ಮಾಜಿ ಶಾಸಕರು ಮತ್ತು ಮುಖಂಡರು ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವುದು ವಿಶೇಷ.
    ಸಂಸದ ಕರಡಿ ಸಂಗಣ್ಣ ತಮ್ಮ ಸದಸ್ಯತ್ವ ಸ್ಥಾನ ಮತ್ತು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದರೆ, ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಅಧಿಕೃತವಾಗಿ ಸೇರಿಕೊಂಡಿದ್ದಾರೆ. ಇನ್ನೊಂದೆಡೆ ಮಾಜಿ ಸಂಸದ ಮುದ್ದಹನುಮೇಗೌಡ ಅವರು ಬಿಜೆಪಿಗೆ ಗುಡ್ ವೈ ಹೇಳಿ ಕಾಂಗ್ರೆಸ್ ಸೇರಿದ್ದಲ್ಲದೆ, ಇದೇ ಪಕ್ಷದಿಂದ ತುಮಕೂರಿನಿಂದ ಲೋಕಸಭೆಗೆ ಸ್ಪರ್ಧೆ ಮಾಡಿದ್ದಾರೆ.
    ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯೆಯಾಗಿದ್ದ ತೇಜಸ್ವಿನಿ ಗೌಡ ಅವರು ತಮ್ಮ ಸದಸ್ಯತ್ವ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಸಚಿವ ಮಾಲೀಕಯ್ಯ ಗುತ್ತೆದಾರ್ ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ.
    ಜೆಡಿಎಸ್‌ನಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಮರಿತಿಬ್ಬೇಗೌಡ, ಅಪ್ಪಾಜಿಗೌಡ, ಮಾಜಿ ಶಾಸಕರಾದ ಎಂ.ಶ್ರೀನಿವಾಸ್, ಗೌರಿಶಂಕರ್ ಅವರು ಕಾಂಗ್ರೆಸ್ ಸೇರಿದ್ದಾರೆ.
    ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡಿದ್ದಾರೆ.
    ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸುತ್ತಿದ್ದು, ಪಕ್ಷದ ವಿರುದ್ದವೇ ಸೆಟೆದು ನಿಂತಿದ್ದಾರೆ. ಇವರಿಬ್ಬರು ಕಾಂಗ್ರೆಸ್ ಸೇರುವುದು ಬಾಕಿ ಇದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts