More

    ಇಂದು ಚುನಾವಣಾ ದಿನಾಂಕ ಘೋಷಣೆ; ಇಂದಿನಿಂದಲೇ ನೀತಿ ಸಂಹಿತೆ ಜಾರಿ

    ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆ -2023 ಕುರಿತು ಭಾರತೀಯ ಚುನಾವಣಾ ಆಯೋಗದ ವತಿಯಿಂದ ನವದೆಹಲಿಯ ವಿಜ್ಞಾನ ಭವನದಲ್ಲಿ 11.30 ಕ್ಕೆ ಪತ್ರಿಕಾಗೋಷ್ಟಿ ನಡೆಯಲಿದ್ದು ಆಗ ಚುನಾವಣಾ ದಿನಾಂಕ ಘೋಷಣೆ ಆಗಲಿದೆ.

    ಚುನಾವಣೆಗೆ ದಿನಾಂಕ ನಿಗದಿ ಆದ ಕೂಡಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಈ ನೀತಿ ಸಂಹಿತೆ ಸರ್ಕಾರ, ಆಡಳಿತ ಸೇರಿದಂತೆ ಹಲವು ಕಡೆಗಳಿಗೆ ಅನ್ವಯ ಆಗಲಿದೆ. ಆಡಳಿತ, ವಿರೋಧ ಪಕ್ಷ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳೂ ಚುನಾವಣಾ ನೀತಿ ಸಂಹಿತೆ ವ್ಯಾಪ್ತಿಗೆ ಬರುತ್ತವೆ. ಸರ್ಕಾರದ ಎಲ್ಲಾ ಇಲಾಖೆಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ನಿಗಮ ಮಂಡಳಿಗಳು, ಸ್ಥಳೀಯ ಪೌರ ಸಂಸ್ಥೆಗಳು, ಸರ್ಕಾರದಿಂದ ಹಣಕಾಸಿನ ನೆರವನ್ನ ಪಡೆಯುವ ಸಂಸ್ಥೆಗಳು ಹಾಗೂ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಈ ಒಂದು ಚುನಾವಣಾ ನೀತಿ ಸಂಹಿತೆ ವ್ಯಾಪ್ತಿಗೆ ಬರ್ತಾರೆ.

    ಇಂದು ಚುನಾವಣಾ ದಿನಾಂಕ ಘೋಷಣೆ; ಇಂದಿನಿಂದಲೇ ನೀತಿ ಸಂಹಿತೆ ಜಾರಿ

    ಚುನಾವಣೆಗೆ ದಿನಾಂಕ ನಿಗದಿ ಆಗುವ ಮುನ್ನ ರಾಜಕಾರಣಿಗಳು ತರಾತುರಿಯಲ್ಲಿ ಯೋಜನೆಗಳ ಉದ್ಘಾಟನೆ ಮಾಡೋದು, ಶಂಕುಸ್ಥಾಪನೆ ಮಾಡೋದನ್ನ ನೋಡಿರುತ್ತೀರಿ. ಇದಕ್ಕೆ ಕಾರಣ ಏನಂದ್ರೆ ಚುನಾವಣಾ ನೀತಿ ಸಂಹಿತೆ ಭಯ.

    ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದರೆ ಹಲವಾರು ನಿರ್ಬಂಧಗಳೂ ಜಾರಿಗೆ ಬರುತ್ತವೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಸರ್ಕಾರ ಹೊಸ ಯೋಜನೆ ಘೋಷಿಸುವಂತಿಲ್ಲ. ಹೊಸ ಕಾರ್ಯಕ್ರಮಗಳ ಅನುಷ್ಠಾನ ಮಾಡುವಂತಿಲ್ಲ. ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಮಾಡುವಂತಿಲ್ಲ. ಹೊಸ ಯೋಜನೆಗೆ ಹಣ ನೀಡುವಂತಿಲ್ಲ. ಹೊಸ ಟೆಂಡರ್ ಕರೆಯುವಂತಿಲ್ಲ. ಈಗಾಗಲೇ ಕರೆದಿದ್ದ ಟೆಂಡರ್ ಫೈನಲ್ ಕೂಡಾ ಮಾಡುವ ಹಾಗಿಲ್ಲ. ಎಲ್ಲದ್ದಕ್ಕಿಂತ ಮುಖ್ಯವಾಗಿ ಸಚಿವರು, ಶಾಸಕರು ಸರ್ಕಾರಿ ವಾಹನ ಬಳಸುವಂತಿಲ್ಲ. ಅಧಿಕಾರಿಗಳ ಜೊತೆ ಸಭೆ ನಡೆಸುವಂತಿಲ್ಲ. ಸರ್ಕಾರಿ ವಸತಿ ಗೃಹ ಬಳಸುವಂತಿಲ್ಲ. ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಮಾತ್ರ ಧ್ವನಿವರ್ಧಕ ಬಳಕೆ ಮಾಡಬೇಕು. ಮಂದಿರ, ಮಸೀದಿ, ಚರ್ಚ್ ಸೇರಿದಂತೆ ಯಾವುದೇ ಧಾರ್ಮಿಕ ಸ್ಥಳಗಳು ಚುನಾವಣಾ ಪ್ರಚಾರಕ್ಕೆ ಬಳಕೆ ಆಗಬಾರದು. ಧರ್ಮ – ಜಾತಿ ವಿಷಯಾಧಾರಿತವಾಗಿ ಮತ ಕೇಳುವಂತೆಯೇ ಇಲ್ಲ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts