More

    ಪ್ರಜಾಪ್ರಭುತ್ವ ಬಲವರ್ಧನೆಗೆ ಮತ ಚಲಾಯಿಸಿ: ಜಿಲ್ಲಾಧಿಕಾರಿ

    ಉಡುಪಿ: ಜಿಲ್ಲೆಯಲ್ಲಿ ಏ. 26 ಹಾಗೂ ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಅರ್ಹ ಮತದಾರರೆಲ್ಲರೂ ತಪ್ಪದೆ ಮತ ಚಲಾಯಿಸಿ, ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕರೆ ನೀಡಿದರು.

    ಉಡುಪಿಯ ಬೋರ್ಡ್​ ಹೈಸ್ಕೂಲ್​ ಆವರಣದಲ್ಲಿ ಸೋಮವಾರ ಲೋಕಸಭಾ ಚುನಾವಣೆ ಹಾಗೂ ಮತದಾನದ ಕುರಿತು ಜಾಗೃತಿ ಮೂಡಿಸುವ ಬೃಹತ್​ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

    ಮತದಾರರು ಮತಗಟ್ಟೆಗಳಿಗೆ ಹೋಗಿ ಮತದಾನ ಮಾಡಲು ಅನುಕೂಲವಾಗುವಂತೆ ಬಿಎಲ್​ಒಗಳು ತಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿರುವ ಮತದಾರರ ಹೆಸರು, ಕ್ರಮಸಂಖ್ಯೆಯ ವೋಟರ್​ ಸ್ಲಿಪ್​ ಹಾಗೂ ಗೈಡ್​ಗಳನ್ನು ಮನೆ ಮನೆಗೆ ವಿತರಿಸುತ್ತಿದ್ದಾರೆ. ಹೀಗಾಗಿ ನೀವೂ ಮತದಾನ ಮಾಡಿ, ನಿಮ್ಮವರನ್ನೂ ಮತ ಚಲಾಯಿಸಲು ಪ್ರೇರೇಪಿಸಿ ಎಂದರು.

    ಜಿಲ್ಲಾ ಸ್ವೀಪ್​ ಸಮಿತಿಯ ಅಧ್ಯಕ್ಷ ಪ್ರತಿಕ್​ ಬಾಯಲ್​ ಮಾತನಾಡಿ, ಮತದಾನ ಕೇಂದ್ರಗಳಲ್ಲಿ ಅಗತ್ಯ ಮೂಲಸೌಲಭ್ಯ ಕಲ್ಪಿಸಲಾಗಿದೆ. ಹೀಗಾಗಿ ಪ್ರತಿಯೊಬ್ಬ ಅರ್ಹ ಮತದಾರರು ತಪ್ಪದೆ ತಮ್ಮ ಮತ ಚಲಾಯಿಸಬೇಕು ಎಂದರು.

    ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್​ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಜಾಥಾದಲ್ಲಿ ಎಎಸ್ಪಿ ಸಿದ್ಧಲಿಂಗಪ್ಪ, ಜಿಪಂ ಉಪಕಾರ್ಯದರ್ಶಿ ರಾಧಾಕೃಷ್ಣ ಅಡಿಗ, ರಾಜ್ಯ ಮಟ್ಟದ ಚುನಾವಣಾ ತರಬೇತಿದಾರ ಅಶೋಕ್​ ಕಾಮತ್​, ಡಿಡಿಪಿಐ ಗಣಪತಿ, ಪೌರಾಯುಕ್ತ ರಾಯಪ್ಪ, ಜಿಲ್ಲಾ ವಾರ್ತಾಧಿಕಾರಿ ಬಿ.ಮಂಜುನಾಥ್​, ಜಿಲ್ಲಾ ಕನ್ನಡ ಮತ್ತು ಸಂಸತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಜಿ.ಶಂಕರ್​ ಕಾಲೇಜಿನ ಪ್ರಾಂಶುಪಾಲ ಭಾಸ್ಕರ್​ ಶೆಟ್ಟಿ ಇತರರಿದ್ದರು. .

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts