ಬೆಳಗಾವಿ: ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸಿ

ಬೆಳಗಾವಿ : ಪ್ರಚಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಪ್ರತಿಯೊಬ್ಬರು ಚುನಾವಣೆಯಲ್ಲಿ ಮತ ಚಲಾಯಿಸಿ ಉತ್ತಮ ನಾಯಕನನ್ನು ಆಯ್ಕೆ ಮಾಡಬೇಕು ಎಂದು ಬೆಳಗಾವಿ ಜಂಟಿ ಸಾರಿಗೆ ಆಯುಕ್ತ ಬಿ.ಪಿ.ಉಮಾಶಂಕರ ಹೇಳಿದ್ದಾರೆ.

ನಗರದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಆಟೋ ಚಾಲಕರು ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರಚಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಮತದಾನ ಎಂಬುದು ಪವಿತ್ರವಾದ ಹಕ್ಕು. ಈ ಹಕ್ಕನ್ನು ಪ್ರತಿಯೊಬ್ಬರೂ ಚಲಾವಣೆ ಮಾಡಬೇಕು ಎಂದರು.

ಬೆಳಗಾವಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತ ಚಲಾವಣೆ ಮಾಡಬೇಕು. ಯಾವುದೇ ಕಾರಣಕ್ಕೂ ಆಸೆ, ಆಮಿಷಗಳಿಗೆ ಒಳಗಾಗದೆ ಉತ್ತಮ ನಾಯಕನನ್ನು ಆಯ್ಕೆ ಮಾಡಬೇಕು. ದೇಶದ ಬದ್ಧತೆಗೆ ಪ್ರತಿಯೊಬ್ಬರ ಮತ ಅವಶ್ಯ ಎಂದು ತಿಳಿಸಿದರು.

ಆಟೋ ಚಾಲಕರು ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದರ ಮೂಲಕ ವಿವಿ ಪ್ಯಾಟ್ ವಿದ್ಯುನ್ಮಾನ ಯಂತ್ರದ ಬಗ್ಗೆ ಮತ್ತು ಮತದಾನ ಚಲಾವಣೆಯ ಪ್ರಕ್ರಿಯ ಕುರಿತು ಜಾಗೃತಿ ಮೂಡಿಸುತ್ತಿದ್ದು ಸಾರಿಗೆ ಇಲಾಖೆ ಅದಕ್ಕೆ ಬೆಂಬಲ ನೀಡಿದೆ ಎಂದರು. ಬೆಳಗಾವಿ ಅಪರ ಸಾರಿಗೆ ಆಯುಕ್ತ ಮಾರುತಿ ಸಾಂಬ್ರಾಣಿ ಸೇರಿ ಆಟೋ ಚಾಲಕರು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.