ಕೇಂದ್ರದ ಮೀಸಲಾತಿ ನಿರ್ಧಾರ ಚುನಾವಣೆ ಗಿಮಿಕ್​: ಕಾಂಗ್ರೆಸ್​

ನವದೆಹಲಿ: ಸಾಮಾನ್ಯ ವರ್ಗದ ಬಡವರಿಗೆ ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿರುವುದು ಚುನಾವಣೆ ಗಿಮಿಕ್​, ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭಯದಲ್ಲಿ ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಕಾಂಗ್ರೆಸ್​ ಪಕ್ಷ ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್​ ಆರ್ಥಿಕವಾಗಿ ಹಿಂದುಳಿದವರಿಗೆ ಸೂಕ್ತ ಅವಕಾಶ ಮತ್ತು ಕೆಲಸ ಸಿಗಬೇಕು ಎಂದು ಬಯಸುತ್ತದೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 4 ವರ್ಷ 8 ತಿಂಗಳ ನಂತರ ಎಚ್ಚೆತ್ತಿದ್ದು, ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡುವುದಾಗಿ ಘೋಷಿಸಿದೆ. ಇದು ಮೋದಿ ಸರ್ಕಾರದ ನಿರ್ಧಾರದ ಕುರಿತು ಪ್ರಶ್ನೆಯನ್ನು ಹುಟ್ಟುಹಾಕುತ್ತದೆ ಎಂದು ಕಾಂಗ್ರೆಸ್​ ವಕ್ತಾರ ರಣದೀಪ್​ ಸುರ್ಜೆವಾಲ ತಿಳಿಸಿದ್ದಾರೆ.

ದೇಶದಲ್ಲಿ 24 ಸರ್ಕಾರಿ ಉದ್ಯೋಗಗಳು ಖಾಲಿ ಇದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ತಿಳಿಸಿತ್ತು. ಮೋದಿ ಸರ್ಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದನ್ನು ಮರೆತಿದೆ. ಕಾಂಗ್ರೆಸ್​ ಉದ್ಯೋಗದಲ್ಲಿ ಮೀಸಲಾತಿ ನೀಡುವುದನ್ನು ಬೆಂಬಲಿಸುತ್ತದೆ. ಆದರೆ ದೇಶದ ಯುವಜನರು ತಮಗೆ ಯಾವಾಗ ಕೆಲಸ ಸಿಗುತ್ತದೆ ಎಂದು ಪ್ರಶ್ನಿಸುತ್ತಿದ್ದಾರೆ ಎಂದು ಸುರ್ಜೆವಾಲ ಕೇಂದ್ರ ನಿರ್ಧಾರವನ್ನು ಟೀಕಿಸಿದ್ದಾರೆ. (ಏಜೆನ್ಸೀಸ್​)