ಸಿನಿಮಾ

ಮತ ಎಣಿಕೆಗೆ ಬೆಳಗಾವಿ ಜಿಲ್ಲಾಡಳಿತ ಸಿದ್ಧತೆ


ಬೆಳಗಾವಿ: ಜಿಲ್ಲೆಯ ೧೮ ವಿಧಾನಸಭಾ ಮತಕ್ಷೇತ್ರದ ಮತ ಏಣಿಕೆ ಆರ್ ಪಿಡಿ ಕಾಲೇಜಿನಲ್ಲಿ ಸಕಲ ಸಿದ್ಧತೆ ಮಾಡಲಾಗಿದ್ದು, ಮಧ್ಯಾಹ್ನದ ವೇಳೆಗೆ ಎಲ್ಲ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು  ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.
ನಗರದ ಆರ್ ಪಿಡಿ ಕಾಲೇಜನಲ್ಲಿ ಸ್ಥಾಪನೆ ಮಾಡಲಾದ ಸ್ಟ್ರಾಂಗ್ ರೂಂ ಬಳಿ ಸುದ್ದಿಗಾರರೊಂದಿಗೆ ಮಾತ‌ನಾಡಿದ ಅವರು,
ರಾಜ್ಯದಲ್ಲಿ ಅತಿ ದೊಡ್ಡ ಮತ ಏಣಿಕೆ ಕೇಂದ್ರ ಆರ್ ಪಿಡಿ ಕಾಲೇಜಿನಲ್ಲಿ ಮಾಡಲಾಗಿದೆ. ಮೊದಲಿಗೆ ೮ ಗಂಟೆಗೆ ಪೋಸ್ಟಲ್ ಬ್ಯಾಲೆಡ್ ಪೇಪರ್ ಕೌಟಿಂಗ್ ಮಾಡಲಾಗುವುದು. ೮.೩೦ರಿಂದ ಇವಿಎಂ ಮತ ಏಣಿಕೆ ಪ್ರಾರಂಭವಾಗುತ್ತದೆ. ಒಂದು ಟೇಬಲ್ ನಲ್ಲಿ ೫೦೦ ಮತಗಳನ್ನು ಏಣಿಕೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಮೂರು ಹಂತದಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಗುರುತಿನ ಚೀಟಿ ಇಲ್ಲದೆ ಯಾರಿಗೂ ಒಳಗಡೆ ಬಿಡುವುದಿಲ್ಲ. ಸುಮಾರು ೫ ಸಾವಿರ ಜನ ಇರುವುದರಿಂದ ಏಜೆಂಟರಿಗೂ ಗುರುತಿನ ಚೀಟಿ ನೀಡಲಾಗಿದೆ ಎಂದರು.
ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ.ಬೋರಲಿಂಗಯ್ಯ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಇದ್ದರು.

Latest Posts

ಲೈಫ್‌ಸ್ಟೈಲ್