More

    ಹೊರೆ ಇಳಿಸಿ ‘ಕೈ’ ಹಿಡಿದ ಬಿಪಿಎನ್ ಕುಟುಂಬ: ಮಳವಳ್ಳಿ ಜೆಡಿಎಸ್‌ಗೆ ಮತ್ತೊಂದು ಹೊಡೆತ

    ಮಂಡ್ಯ: ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿ ಹಲವು ಹಿರಿಯ ಮುಖಂಡರು ಪಕ್ಷ ತೊರೆಯುತ್ತಿರುವುದರ ನಡುವೆ ಮಳವಳ್ಳಿ ಜೆಡಿಎಸ್‌ಗೆ ಮತ್ತೊಂದು ಹೊಡೆತ ಬಿದ್ದಿದೆ. ರಾಜ್ಯಸಭೆಯ ಜಿಲ್ಲೆಯ ಪ್ರಥಮ ಸದಸ್ಯ ಎನ್ನುವ ಹೆಗ್ಗಳಿಕೆ ಹೊಂದಿದ್ದ ಸಜ್ಜನ ರಾಜಕಾರಣಿ ಬಿ.ಪಿ.ನಾಗರಾಜಮೂರ್ತಿ ಅವರ ಕುಟುಂಬದ ಸದಸ್ಯರು ಹೊರೆ ಇಳಿಸಿ ಕಾಂಗ್ರೆಸ್ ಸೇರಿದ್ದಾರೆ.
    ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸಮ್ಮುಖದಲ್ಲಿ ಬಿ.ಪಿ.ನಾಗರಾಜಮೂರ್ತಿ ಅವರ ಮಗ ಚಂದ್ರಶೇಖರ್ ಹಾಗೂ ಸೊಸೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸುಧಾ ಕಾಂಗ್ರೆಸ್ ಬಾವುಟ ಹಿಡಿಯುವ ಮೂಲಕ ಪಕ್ಷಕ್ಕೆ ಸೇರಿಕೊಂಡರು. ಇದರೊಂದಿಗೆ ಮಳವಳ್ಳಿ ಕ್ಷೇತ್ರದ ಪ್ರಬಲ ಲಿಂಗಾಯತ ಸಮುದಾಯ ಕುಟುಂಬ ಕಾಂಗ್ರೆಸ್ ಸೇರಿದ್ದು ಜೆಡಿಎಸ್‌ಗೆ ಹಿನ್ನಡೆಯದಂತಾಗಿದೆ.
    ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಧಾ, ಕ್ಷೇತ್ರದಲ್ಲಿ ಪಿ.ಎಂ.ನರೇಂದ್ರಸ್ವಾಮಿ ಅವರ ಅಭಿವೃದ್ಧಿ ಕಾರ್ಯವನ್ನು ಮೆಚ್ಚಿ ಕಾಂಗ್ರೆಸ್ ಸೇರಿದ್ದೇವೆ. ಕಳೆದ ಐದು ವರ್ಷದಲ್ಲಿ ಶಾಸಕ ಡಾ.ಕೆ.ಅನ್ನದಾನಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡುವಲ್ಲಿ ವಿಲವಾಗಿದ್ದಾರೆ. ನರೇಂದ್ರಸ್ವಾಮಿ ಅವರು ತಮ್ಮ ಅಧಿಕಾರಾವಧಿಯಲ್ಲಿ ತಂದಿದ್ದ ಬಿ.ಜಿ ಪುರ ಹನಿ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವಲ್ಲಿ ಶಾಸಕರು ನಿರ್ಲಕ್ಷ್ಯ ತೋರಿದರು. ಕಳೆದ ಚುನಾವಣೆಯಲ್ಲಿ ಕ್ಷೇತ್ರದ ಲಿಂಗಾಯಿತ ಸಮುದಾಯ ಜೆಡಿಎಸ್ ಬೆಂಬಲಿಸಿತ್ತು. ಆದರೂ ಸಮುದಾಯಕ್ಕೆ ಅನುಕೂಲವಾಗುವಂತಹ ಕೆಲಸ ಅನುಷ್ಠಾನಗೊಳಿಸಲಿಲ್ಲ. ಬೆಂಬಲಿಸಿದವರ ವಿರುದ್ಧ ಕೇಸ್‌ಗಳನ್ನು ಹಾಕಿಸಿದ್ದರು ಎಂದು ವಾಗ್ದಾಳಿ ನಡೆಸಿದರು.
    ರಾಜ್ಯಸಭೆ ಸದಸ್ಯ ಜಿ.ಸಿ.ಚಂದ್ರಶೇಖರ್ ಮಾತನಾಡಿ, ಸ್ಥಳೀಯರನ್ನೇ ಗೆಲ್ಲಿಸುವ ಮೂಲಕ ಮಂಡ್ಯ ಜಿಲ್ಲೆಯ ಜನರು ಮಂಡ್ಯದ ಸ್ವಾಭಿಮಾನವನ್ನು ಎತ್ತಿ ಹಿಡಿಯಬೇಕು. ಹೊರಗಿನವರಿಗೆ ಮಣೆ ಹಾಕಬಾರದು. ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ನಿಂದ ಪ್ರಮುಖ ವ್ಯಕ್ತಿ ಕಣಕ್ಕಿಳಿಯಲಿದ್ದಾರೆಂಬ ಮಾಹಿತಿ ಇದೆ. ಹೀಗಾಗಿ ಕಾಂಗ್ರೆಸ್ ಕೂಡ ಅದಕ್ಕೆ ಪ್ರತಿತಂತ್ರ ರೂಪಿಸಿದೆ. ಪಕ್ಷದಿಂದ ಸಾಮಾನ್ಯ ಕಾರ್ಯಕರ್ತ, ಪ್ರಭಾವಿ ವ್ಯಕ್ತಿ ಅಥವಾ ಮಹಿಳೆಯೊಬ್ಬರನ್ನು ಕಣಕ್ಕಿಳಿಸಲು ಚಿಂತಿಸಲಾಗಿದೆ. ಈ ಕಾರಣಕ್ಕಾಗಿಯೇ ಪಿ.ರವಿಕುಮಾರ್‌ಗೌಡ ಅವರಿಗೆ ಟಿಕೆಟ್ ಘೋಷಣೆಯಾಗಿದ್ದರೂ ಇನ್ನೂ ಬಿ ಾರ್ಮ್ ನೀಡಿಲ್ಲ ಎಂದು ಸ್ಪಷ್ಪಪಡಿಸಿದರು.
    ಜಿಲ್ಲೆಯಲ್ಲಿ 2018ರ ಚುನಾವಣೆ ಫಲಿತಾಂಶ ಈ ಬಾರಿ ಉಲ್ಟಾ ಆಗಲಿದೆ. ಎಲ್ಲ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಅದಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗಿದೆ. ಬಿಜೆಪಿ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಕೃಷಿ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿದ್ದ ಕೇಂದ್ರದ ಬಿಜೆಪಿ ಸರಕಾರ, ಕೃಷಿ ವೆಚ್ಚವನ್ನು ದ್ವಿಗುಣಗೊಳಿಸಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೇ ಕಾರಣ. 2008ರಲ್ಲಿ ಧರ್ಮಸಿಂಗ್ ನೇತೃತ್ವದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಪತನಗೊಳಿಸಿದ ಪರಿಣಾಮ ಮೊದಲ ಬಾರಿಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತು. 2018ರಲ್ಲೂ ಕೊಟ್ಟ ಅಧಿಕಾರವನ್ನು ಸಮರ್ಥವಾಗಿ ನಿಭಾಯಿಸಲಾಗದೆ ವಿಫಲರಾದರು. ಪರಿಣಾಮ 2ನೇ ಬಾರಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ, ಮಹಿಳಾಧ್ಯಕ್ಷೆ ಅಂಜನಾ ಶ್ರೀಕಾಂತ್, ಮಳವಳ್ಳಿ ಪುರಸಭೆ ಸದಸ್ಯೆ ಪ್ರಮೀಳಾ, ಕಾಂಗ್ರೆಸ್ ಮುಖಂಡ ಚಂದ್ರಶೇಖರ್ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts