More

    ಕ್ಷೇತ್ರದ ಜನರ ಒಲವು ನನ್ನ ಪರ: ಜೆಡಿಎಸ್ ಅಭ್ಯರ್ಥಿ ಎಚ್.ಟಿ.ಮಂಜು ವಿಶ್ವಾಸ

    ಕೆ.ಆರ್.ಪೇಟೆ: ಜೆಡಿಎಸ್ ಅಭ್ಯರ್ಥಿ ಎಚ್.ಟಿ.ಮಂಜು ತಾಲೂಕಿನ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
    ಅಕ್ಕಿಹೆಬ್ಬಾಳು ಹೋಬಳಿಯ ಸೋಮನಹಳ್ಳಿ ಗ್ರಾಮದಲ್ಲಿ 30ಕ್ಕೂ ಹೆಚ್ಚು ಯುವಕರು, ಮತ್ತಿಘಟ್ಟ ಗ್ರಾಮದಲ್ಲಿ ಹಲವಾರು ಹಿರಿಯ ಮುಖಂಡರು ಮತ್ತು ಯುವಕರು, ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 100ಕ್ಕೂ ಹೆಚ್ಚು ಯುವಕರು ಹಾಗೂ ಹಿರಿಯ ಮುಖಂಡರು ಕಾಂಗ್ರೆಸ್ ಮತ್ತು ಬಿಜೆಪಿ ತೊರೆದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡರು. ಸಿಂದಘಟ್ಟ ಗ್ರಾಮದ ಗ್ರಾಪಂ ಸದಸ್ಯರಾದ ರಾಜೇಶ್ವರಿ ನಂಜುಂಡಪ್ಪ ಸೇರಿದಂತೆ 50ಕ್ಕೂ ಹೆಚ್ಚು ಮುಖಂಡರು ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾದರು.
    ಕ್ಷೇತ್ರದ ಜನರ ಹೆಚ್ಚಿನ ಒಲವು ನನ್ನ ಪರವಿದ್ದು, ಈ ಬಾರಿ ನನ್ನ ಗೆಲವು ನಿಶ್ಚಿತ. ಶೀಳನೆರೆ ಹೋಬಳಿಗೆ ಎಸ್.ಎಂ.ಲಿಂಗಪ್ಪ ನಂತರ 55 ವರ್ಷಗಳ ಬಳಿಕ ಶಾಸಕರಾಗುವ ಅಪರೂಪದ ಅವಕಾಶ ಸಿಕ್ಕಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ನಮ್ಮಲ್ಲಿ ಏನೇ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ತಲೆಕೆಡಿಸಿಕೊಳ್ಳದೆ ಜೆಡಿಎಸ್ ಗೆಲುವಿಗಾಗಿ ಶ್ರಮವಹಿಸಬೇಕು ಎಂದು ಕೋರಿದರು.
    ರಾಜ್ಯ ಮಾರಾಟ ಮಹಾ ಮಂಡಳದ ನಿರ್ದೇಶಕ ಎಸ್.ಎಲ್.ಮೋಹನ್, ಎಂಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಕೆ.ಅಶೋಕ್, ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಮು, ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ಎಂ.ಕಿರಣ್, ಮನ್ಮುಲ್ ಮಾಜಿ ಅಧ್ಯಕ್ಷ ಎಂ.ಬಿ.ಹರೀಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts