More

    237ನೇ ಬಾರಿ ಅದೃಷ್ಟ ಪರೀಕ್ಷೆಗಿಳಿದ ಎಲೆಕ್ಷನ್ ಕಿಂಗ್; ಕೆಸಿಆರ್​ ವಿರುದ್ಧ ನಾಮಪತ್ರ ಸಲ್ಲಿಕೆ

    ಹೈದರಾಬಾದ್: ದೇಶದ ವಿವಿಧೆಡೆ 236 ಭಾರಿ ಸ್ಪರ್ಧಿಸಿ ಸೋಲುಂಡು ಎಲೆಕ್ಷನ್​ ಕಿಂಗ್​ ಎಂದೇ ಖ್ಯಾತಿ ಪಡೆದಿರುವ,ತಮಿಳುನಾಡಿನ ಕೆ ಪದ್ಮರಾಜನ್ ಅವರು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ.

    ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್​ ಪ್ರತಿನಿಧಿಸುವ ಗಜ್​ವೇಲ್​ ವಿಧಾನಸಭಾ ಕ್ಷೇತ್ರದಿಂದ 237ನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಗಳಿಂದ ಹಿಡಿದು ರಾಷ್ಟ್ರಪತಿ ಚುನಾವಣೆವರೆಗೂ ಸ್ಪರ್ಧಿಸಿದ್ದಾರೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಉತ್ತರಪ್ರದೇಶ, ತೆಲಂಗಾಣ ಸೇರಿದಂತೆ ದೇಶದ ವಿವಿಧೆಡೆ ಸ್ಪರ್ಧಿಸಿ ಸೋಲುಂಡು ಖ್ಯಾತಿ ಪಡೆದಿದ್ದಾರೆ.

    ಪಂಕ್ಚರ್​ ಅಂಗಡಿ ನಡೆಸುತ್ತಿರುವ ಪದಮರಾಜನ್​ 1998ರಲ್ಲಿ ಮೊದಲ ಬಾರಿಗೆ ಮೆಟ್ಟೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಹೋಮಿಯೋಪಥಿ ವೈದ್ಯರು ಎಂದು ಹೇಳಿಕೊಳ್ಳುವ ಪದ್ಮರಾಜನ್ ನೂರಾರು ಭಾರಿ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ದಾಖಲೆ ಮಾಡಿದ್ದಾರೆ. ಇದಕ್ಕಾಗಿ ಈವರೆಗೆ ಸುಮಾರು 1 ಕೋಟಿ ರೂಪಾಯಿ ಹಣವನ್ನು ಸಹ ವ್ಯಯಿಸಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

    ಇದನ್ನೂ ಓದಿ: ಕೇರಳ ಬಾಂಬ್​ ಬ್ಲ್ಯಾಸ್ಟ್​ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

    2019ರ ಲೋಕಸಭೆ ಚುನಾವಣೆಯಲ್ಲಿ ವಯನಾಡ್​ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ರಾಹುಲ್​ ಗಾಂಧಿ ಎದುರು ಸ್ಪರ್ಧಿಸಿದ್ದರು. ಇದಲ್ಲದೆ ಮಾಜಿ ಪ್ರಧಾನಿಗಳಾದ ಅಟಲ್​ ಬಿಹಾರಿ ವಾಜಪೇಯಿ ಹಾಗೂ ಪಿ.ವಿ. ನರಸಿಂಹ ರಾವ್​ ಎದುರು ಸ್ಪರ್ಧಿಸಿ ಸೋತಿದ್ದಾರೆ. 2011ರ ತಮಿಳುನಾಡು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೆಟ್ಟೂರು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿದಿ 6,273 ಮತಗಳನ್ನು ಪಡೆದಿರುವುದು ಈವರೆಗಿನ ಗರಿಷ್ಠ ದಾಖಲೆಯಾಗಿದೆ.

    ತಾವು ಹಾಗೂ ತಮ್ಮ ಕುಟುಂಬದ ಸದಸ್ಯರು ಈವರೆಗೆ ಆದಾಯ ತೆರಿಗೆ ಪಾವತಿ ಮಾಡಿಲ್ಲ. ಒಂದು ಮೊಪೆಡ್​ ಸೇರಿದಂತೆ 1.10 ಲಕ್ಷ ರೂಪಾಯಿ ಮೌಲ್ಯ ಚರಾಸ್ಥಿ ಹೊಂದಿದ್ದು, ವಾರ್ಷಿಕ 1 ಲಕ್ಷ ರೂಪಾಯಿ ಇದೇ. 8ನೇ ತರಗತಿ ವರೆಗೆ ವಿದ್ಯಾಬ್ಯಾಸ ಮುಗಿಸಿದ್ದು, ಅಣ್ಣಾಮಲೈ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ ವ್ಯಾಸಂಗ ಮಾಡುತ್ತಿರುವುದಾಗಿ ತಮ್ಮ ಅಫಿಡೆವಿಟ್​ನಲ್ಲಿ ತಿಳಿಸಿದ್ದಾರೆ.

    ಮುಂದಿನ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಗದ್ದುಗೆಗಾಗಿ ಆಡಳಿತರೂಢ ಬಿಆರ್​ಎಸ್​, ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 119 ಸದಸ್ಯಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts