More

    ಮುನಿಸು ಬಿಟ್ಟ ಜೆ.ಸಿ.ಮಾಧುಸ್ವಾಮಿ;ಬಿಜೆಪಿ ಪ್ರಚಾರದಲ್ಲಿ ಪುಲ್ ಆಕ್ಟೀವ್

    ಬೆಂಗಳೂರು:
    ಬಿಜೆಪಿಯಲ್ಲಿ ಮುನಿಸಿಕೊಂಡಿದ್ದ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಈಗ ಪುಲ್ ಆಕ್ಟೀವ್ ಆಗಿದ್ದು, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತ ಯಾಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
    ಚಿಕ್ಕಮಗಳೂರು ಕ್ಷೇತ್ರ, ಹಾಸನ ಮತ್ತು ಚಿತ್ರದುರ್ಗ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿರುವ ಮಾಧುಸ್ವಾಮಿ ಸಾರ್ವಜನಿಕ ಸಭೆಯಲ್ಲಿಯೂ ಭಾಗವಹಿಸುತ್ತಿದ್ದಾರೆ.
    ವಿಶೇಷವಾಗಿ ಈ ಮೂರು ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯಿತರ ಸಭೆಗಳನ್ನು ನಡೆಸುತ್ತಿರುವ ಅವರು, ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮುಖ ನೋಡಿಕೊಂಡು ಸಮಾಜದವರು ಮತ ನೀಡಬೇಕು ಎಂದು ಮನವಿ ಮಾಡುತ್ತಿದ್ದಾರೆ.
    ಚಿಕ್ಕಮಗಳೂರು ಮತ್ತು ಉಡುಪಿ ಕ್ಷೇತ್ರದಲ್ಲಿ ಹೆಚ್ಚು ಪ್ರವಾಸ ಮಾಡುತ್ತಿರುವುದು ರಾಜಕೀಯವಾಗಿ ಗಮನ ಸೆಳೆದಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಗೆದ್ದರೆ, ವಿಧಾನ ಪರಿಷತ್‌ನಲ್ಲಿ ಒಂದು ಸ್ಥಾನ ತೆರವಾಗಲಿದೆ. ಅಷ್ಟೆ ಅಲ್ಲ, ಮೇಲ್ಮನೆಯ ವಿರೋಧ ಪಕ್ಷದ ನಾಯಕನ ಸ್ಥಾನವೂ ತೆರವಾಗಲಿದೆ.
    ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ವಿ.ಸೋಮಣ್ಣ ಅವರಿಗೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಪಕ್ಷ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದ ಮಾಧುಸ್ವಾಮಿ ಅವರನ್ನು ಖುದ್ದು ಬಿ.ಎಸ್.ಯಡಿಯೂರಪ್ಪ ಅವರೇ ಸಮಾಧಾನಪಡಿಸಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ, ಮೇಲ್ಮನೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನ ನೀಡುವ ಭರವಸೆಯನ್ನು ನೀಡಿದ್ದರು ಎಂದು ಮೂಲಗಳು ಖಚಿತಪಡಿಸಿವೆ.
    ತುಮಕೂರು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿಯ ವಿರೋಧವಾಗಿ ನಾನು ಪ್ರಚಾರ ಮಾಡುವುದಿಲ್ಲ. ತಟಸ್ಥ್ಥವಾಗಿರುತ್ತೇನೆ. ಇನ್ನುಳಿದಂತೆ ಯಾವು ಹೇಳಿದ ಕಡೆಯಲ್ಲಿ ಪ್ರಚಾರ ಮಾಡುವುದಾಗಿ ತಿಳಿಸಿದ್ದರು ಎಂದು ಮೂಲಗಳು ತಿಳಿಸಿವೆ.
    ಯಡಿಯೂರಪ್ಪ ಅವರ ಮಾತಿಗೆ ಓಗೊಟ್ಟಿರುವ ಮಾಧುಸ್ವಾಮಿ ಮೊದಲ ಹಂತದಲ್ಲಿ ನೆರೆ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದು, ಎರಡನೇ ಹಂತದಲ್ಲಿ ಉತ್ತರ ಕರ್ನಾಟಕ ಭಾಗದ ಕ್ಷೇತ್ರಗಳಲ್ಲಿಯೂ ಪ್ರಚಾರದಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ ಎಂದು ಅವರ ಆಪ್ತ ಬಳಗ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts