More

    ಅಭಿಪ್ರಾಯ ಕೇಳದೆ ಜಿಪಂ-ತಾಪಂ ಚುನಾವಣೆಗೆ ಆಯೋಗ ಸಿದ್ಧತೆ: ಸಚಿವ ಈಶ್ವರಪ್ಪ

    ಶಿವಮೊಗ್ಗ: ಚುನಾವಣಾ ಆಯೋಗ ರಾಜ್ಯ ಸರ್ಕಾರದ ಅಭಿಪ್ರಾಯ ಕೇಳದೆ ಜಿಪಂ ಮತ್ತು ತಾಪಂ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈಗಾಗಲೇ ಕರಡು ಮೀಸಲು ಪ್ರಕಟ ಮಾಡಿರುವ ಆಯೋಗ ಶೀಘ್ರದಲ್ಲೇ ಚುನಾವಣೆ ಘೋಷಣೆ ಮಾಡಿದರೂ ಅಚ್ಚರಿ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
    ಕರೊನಾ ಕಾರಣ ಡಿಸೆಂಬರ್‌ವರೆಗೆ ಜಿಪಂ ಮತ್ತು ತಾಪಂ ಚುನಾವಣೆ ನಡೆಸುವುದು ಬೇಡ ಎಂಬುದು ಸರ್ಕಾರದ ನಿಲುವಾಗಿತ್ತು. ಆದರೆ ಆಯೋಗ ಸರ್ಕಾರದ ಅಭಿಪ್ರಾಯ ಕೇಳದೆ ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ. ಒಂದು ವೇಳೆ ಚುನಾವಣೆಗೆ ಅಧಿಸೂಚನೆ ಹೊರಡಿಸಿದರೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಜಿಪಂ ಹಾಗೂ ತಾಪಂ ಕ್ಷೇತ್ರಗಳ ಕರಡು ಮೀಸಲು ಘೋಷಿಸಿರುವುದಕ್ಕೆ ಅಭ್ಯಂತರವಿಲ್ಲ. ಆದರೆ ಸರ್ಕಾರದೊಂದಿಗೆ ಸಮಾಲೋಚನೆ ಮಾಡಿ ಕರಡು ಮೀಸಲಾತಿ ಘೋಷಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಕೋರ್ಟ್ ಮೊರೆ ಹೋಗಬಹುದು
    ಆಯೋಗ ಪ್ರಕಟಿಸಿರುವ ಜಿಪಂ ಮತ್ತು ತಾಪಂ ಕರಡು ಮೀಸಲು ಬಗ್ಗೆ ಅಪಸ್ವರಗಳು ಕೇಳಿಬರುತ್ತಿವೆ. ಈ ವಿಚಾರದಲ್ಲಿ ಸರ್ಕಾರ ಏನು ಮಾಡಲು ಸಾಧ್ಯವಿಲ್ಲ. ತಕರಾರು ಸಲ್ಲಿಸಲು ಆಯೋಗ ಅವಕಾಶ ನೀಡಿದೆ. ಆಗಲೂ ಸರಿ ಆಗಿಲ್ಲ ಎಂದಾದರೆ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಹೇಳಿದರು.
    ಯುಪಿ ಮಾದರಿಯಲ್ಲಿ ಗೆಲುವು: ಜಿಪಂ ಚುನಾವಣೆಯಲ್ಲಿ ಉತ್ತರ ಪ್ರದೇಶ ಮಾದರಿಯಲ್ಲಿ ರಾಜ್ಯದಲ್ಲೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಉತ್ತರ ಪ್ರದೇಶದಲ್ಲಿ 75 ಜಿಪಂಗಳಲ್ಲಿ ಬಿಜೆಪಿ 65 ಕಡೆ ಗೆದ್ದಿದೆ. ರಾಜ್ಯದಲ್ಲೀ ಇದೇ ರೀತಿ ಬಿಜೆಪಿ ಅತಿ ಹೆಚ್ಚು ಜಿಪಂಗಳಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts