More

    ಕಾಂಗ್ರೆಸ್ ಆಡಳಿತ ಬಯಸಿದ ನಾಗರಿಕರು: ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ವಿಶ್ವಾಸ

    ಮಂಡ್ಯ: ವಿಧಾನಸಭಾ ಚುನಾವಣೆಗೆ ಮತದಾನ ಮುಕ್ತಾಯವಾಗಿದೆ. ಈ ಬಾರಿ ಮಂಡ್ಯ ಜಿಲ್ಲೆಯಲ್ಲಿ ಶೇ.84ರಷ್ಟು ಮತದಾನವಾಗಿದೆ. ಈ ಮೂಲಕ ಮತದಾರರು ಭಾರಿ ಹುಮ್ಮಸ್ಸಿನಿಂದ ಮತ ಚಲಾಯಿಸಿದ್ದಾರೆ. ಈ ಪ್ರಮಾಣದ ಮತದಾನವನ್ನು ನೋಡಿದರೆ ಇದು ಆಡಳಿತ ವಿರೋಧಿ ಅಲೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಹೇಳಿದ್ದಾರೆ.
    ಜನರು ಈ ಬಾರಿ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎಂಬುದು ಜನ ಬೆಂಬಲದಿಂದ ಗೊತ್ತಾಗುತ್ತದೆ. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಕನಿಷ್ಟ 140 ಸ್ಥಾನಗಳನ್ನು ಪಡೆದು ಪೂರ್ಣ ಬಹುಮತದಿಂದ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲಿದೆ. ಅಂತೆಯೇ ಮಂಡ್ಯ ಜಿಲ್ಲೆಯಲ್ಲಿ ಏಳಕ್ಕೆ ಏಳೂ ಕ್ಷೇತ್ರವನ್ನೂ ಕಾಂಗ್ರೆಸ್ ಗೆಲ್ಲಲಿದೆ. ಈ ಹಿನ್ನೆಲೆಯಲ್ಲಿ ಮತದಾರ ಪ್ರಭುಗಳಿಗೆ ಧನ್ಯವಾದವನ್ನು ಅರ್ಪಿಸುತ್ತೇನೆ ಎಂದಿದ್ದಾರೆ.
    ಈ ಬಾರಿಯ ಚುನಾವಣೋತ್ತರ ಸಮೀಕ್ಷೆ ಸಹ ಕಾಂಗ್ರೆಸ್ ಜಯಭೇರಿ ಭಾರಿಸಲಿದೆ ಎಂಬುದನ್ನು ಸ್ಪಷ್ಟವಾಗಿ ಹೇಳಿದೆ. ಇನ್ನು ಇದಕ್ಕೆ ಕಾರಣವೂ ಇದೆ. ಬಡವರ, ದೀನದಲಿತರ ಪರವಾಗಿ ಕಾಂಗ್ರೆಸ್ ನಿಂತಿರುವುದು ಎಂಬುದು ಸಹ ಅಷ್ಟೇ ಸತ್ಯವಾಗಿದೆ. ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ಮೂಲಕ 2 ಸಾವಿರ ರೂ ಪ್ರೋತ್ಸಾಹಧನ, 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರೋದ್ಯೋಗಿ ಯುವಕರಿಗೆ 3 ಸಾವಿರ ರೂ ಪ್ರೋತ್ಸಾಹಧನ, ಬಡವರಿಗೆ 10 ಕೆಜಿ ಅಕ್ಕಿ ಸೇರಿದಂತೆ ಇನ್ನಿತರ ಜನಪರ ಕಾರ್ಯಕ್ರಮವನ್ನು ಕಾಂಗ್ರೆಸ್ ಘೋಷಿಸಿದೆ. ಇದು ಪಕ್ಷದತ್ತ ಜನರು ಬರಲು ಕಾರಣವಾಗಿದೆ. ಮತದಾನ ಮಾಡಿದ ಎಲ್ಲ ಮತದಾರರಿಗೂ ಧನ್ಯವಾದವನ್ನು ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts