ಸಿನಿಮಾ

ಮತ ಯಂತ್ರಗಳೊಂದಿಗೆ ಮತಗಟ್ಟೆಗೆ ಸಾಗಿದ ಸಿಬ್ಬಂದಿ

ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಮಂಗಳವಾರ ನಡೆಯಿತು. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ ಮತಯಂತ್ರಗಳೊಂದಿಗೆ ಸೂಚಿಸಿದ ಮತಗಟ್ಟೆಗಳಿಗೆ ತೆರಳಿದರು.


ಮೂಡುಬಿದಿರೆ ಮಹಾವೀರ ಕಾಲೇಜಿನಲ್ಲಿ ಮೂಲ್ಕಿ-ಮೂಡುಬಿದಿರೆ ಕ್ಷೇತ್ರ, ರೊಸಾರಿಯೋ ಪದವಿಪೂರ್ವ ಕಾಲೇಜಿನಲ್ಲಿ ಮಂಗಳೂರು ನಗರ ಉತ್ತರ, ಉರ್ವ ಕೆನರಾ ಹೈಸ್ಕೂಲ್‌ನಲ್ಲಿ ಮಂಗಳೂರು ನಗರ ದಕ್ಷಿಣ, ಕೊಣಾಜೆ ಮಂಗಳೂರು ವಿವಿ ಆವರಣದಲ್ಲಿ ಮಂಗಳೂರು ಕ್ಷೇತ್ರದ ಮಸ್ಟರಿಂಗ್ ಪ್ರಕ್ರಿಯೆ ನಡೆಯಿತು.


ಉಳಿದಂತೆ ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ, ಮೊಡಂಕಾಪು ಇನ್‌ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಂಟ್ವಾಳ ಕ್ಷೇತ್ರ, ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸುಳ್ಯ ಕ್ಷೇತ್ರ, ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ ತೆಂಕಿಲ ಪುತ್ತೂರು ಕ್ಷೇತ್ರದ ಮಸ್ಟರಿಂಗ್ ಪ್ರಕ್ರಿಯೆ ನಡೆಯಿತು. ಚುನಾವಣೆ ಮುಗಿದ ಬಳಿಕ ಡಿಮಸ್ಟರಿಂಗ್ ಕೂಡಾ ಇದೇ ಕೇಂದ್ರಗಳಲ್ಲಿ ನಡೆಯಲಿದೆ.


ಸಿಬ್ಬಂದಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಭದ್ರತೆಯೊಂದಿಗೆ ಮತಯಂತ್ರಗಳನ್ನು ಹಸ್ತಾಂತರಿಸಲಾಯಿತು. ಮಧ್ಯಾಹ್ನ 1 ಗಂಟೆಯ ವೇಳೆಗೆ ಊಟ ಮುಗಿಸಿಕೊಂಡು ಕರ್ತವ್ಯಕ್ಕೆ ತೆರಳಿದರು. ಮಸ್ಟರಿಂಗ್ ಕೇಂದ್ರಗಳಲ್ಲಿ ಅರೆ ಸೇನಾ ಪಡೆ, ಪೊಲೀಸರನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ನಗರದ ಮಸ್ಟರಿಂಗ್ ಕೇಂದ್ರಗಳಿಗೆ ತೆರಳಿ ಭದ್ರತಾ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿ ಮಾರ್ಗದರ್ಶನ ನೀಡಿದರು. ಹೊರ ರಾಜ್ಯದಿಂದ ಆಗಮಿಸಿದ ಭದ್ರತಾ ಸಿಬಂದಿ ಜಿಲ್ಲೆಯ ಉರಿಬಿಸಿಲಿನ ವಾತಾವರಣದಿಂದ ಕಂಗೆಟ್ಟರು.

Latest Posts

ಲೈಫ್‌ಸ್ಟೈಲ್