ಇಳಕಲ್ಲ(ಗ್ರಾ): ಇಲ್ಲಿನ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಆ. 20 ರಂದು ಮಧ್ಯಾಹ್ನ ಒಂದು ಗಂಟೆಗೆ ನಡೆಯಲಿದೆ.
ನಗರಸಭೆಯ ಎಸ್. ಆರ್. ಕಂಠಿ ಸಭಾಭವನದಲ್ಲಿ ಹಿಂದುಳಿದ ವರ್ಗ ‘ಬ’ ಮೀಸಲು ಅಧ್ಯಕ್ಷ ಸ್ಥಾನಕ್ಕೆ ಮತ್ತು ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. 1 ಗಂಟೆಗೆ ಸಭೆ ಆರಂಭಿಸಿ ನಾಮಪತ್ರಗಳ ಪರಿಶೀಲಿಸಿದ ಬಳಿಕ ವಾಪಸಾತಿಗೆ ಅವಕಾಶ ಕಲ್ಪಿಸಲಾಗುವುದು. ನಂತರ ಚುನಾವಣೆ ನಡೆಯಲಿದೆ ಎಂದು ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸಾರ ತಿಳಿಸಿದ್ದಾರೆ.
ನಗರಸಭೆಯ 30 ಸದಸ್ಯರೊಂದಿಗೆ ಲೋಕಸಭೆ ಸದಸ್ಯರಿಗೆ, ಶಾಸಕರಿಗೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಮತದಾನ ಮಾಡುವ ಹಕಿದ್ದು, ಎಲ್ಲರಿಗೂ ಚುನಾವಣೆ ನೋಟಿಸ್ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.