More

    ಜೂ.3ರಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ

    ಮೈಸೂರು: ಚುನಾವಣಾ ಆಯೋಗ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.


    ಮೇ 9ರಂದು ಅಧಿಸೂಚನೆಯನ್ನು ಹೊರಡಿಸಲಿದ್ದು, ಅಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಲಿದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮೇ 17ರಂದು ನಾಮಪತ್ರಗಳ ಪರಿಶೀಲನೆ, ಮೇ 20ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.
    ಜೂನ್ 3ರಂದು ಬೆಳಗ್ಗೆ 8ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ.


    ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಅರ್ಹ ಮತದಾರರ ನೋಂದಾವಣೆಗೆ ಅರ್ಜಿ ಸಲ್ಲಿಸಲು ಮೇ 6ರಂದು ಕೊನೆಯ ದಿನಾಂಕವಾಗಿದ್ದು, ಅಗತ್ಯ ದಾಖಲಾತಿಗಳೊಂದಿಗೆ ಅರ್ಹ ಮತದಾರರು ಜಿಲ್ಲೆಯ ಎಲ್ಲ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
    ಜಿಲ್ಲಾಧಿಕಾರಿ, ಮಹಾನಗರಪಾಲಿಕೆ ಆಯುಕ್ತರು, ಉಪ ಆಯುಕ್ತರು(ಕಂದಾಯ), ಉಪ ಆಯುಕ್ತರು (ಆಡಳಿತ), ಕೌನ್ಸಿಲ್ ಕಾರ್ಯದರ್ಶಿಗಳು, ಹುಣಸೂರು ಉಪವಿಭಾಗದ ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲ ತಾಲೂಕು ತಹಸೀಲ್ದಾರ್ ಅವರು ಸಹಾಯಕ ಮತದಾರರ ನೋಂದಣಾಧಿಕಾರಿಗಳಾಗಿ ನೇಮಿಸಲಾಗಿದೆ.


    ಮೇ 6ರಂದು ಕಚೇರಿ ಕಾರ್ಯನಿರ್ವಹಣೆ ಅವಧಿಯ ಒಳಗಾಗಿ ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿ ಕಚೇರಿಗಳಿಗೆ ಅರ್ಜಿಗಳನ್ನು ಸಲ್ಲಿಸಬೇಕು. ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಎಲ್ಲ ಅರ್ಹ ಮತದಾರರ ನೋಂದಣಿಗೊಳ್ಳಲು ಹಾಗೂ ಮತದಾರರ ಪಟ್ಟಿಯನ್ನು ದೋಷರಹಿತವಾಗಿ ಸಿದ್ಧಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts