ಕಾರು ಡಿಕ್ಕಿ ಹೊಡೆದು ಚುನಾವಣಾ ಅಧಿಕಾರಿಗೆ ಗಾಯ

blank

ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆಗೆ ನಿರ್ಮಿಸಿದ್ದ ಚೆಕ್‌ಪೋಸ್ಟ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಸೆಸ್ಕ್ ಅಧಿಕಾರಿ ಗಾಯಗೊಂಡಿದ್ದಾರೆ.
ಅಪಘಾತದಿಂದ ಸೆಸ್ಕ್‌ನ ಕಿರಿಯ ಸಹಾಯಕ ವೀರಭದ್ರಪ್ಪ ಬಲಗಾಲು ಮುರಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆ.ಆರ್.ಎಸ್ ರಸ್ತೆಯ ಕೂರ್ಗಳ್ಳಿಯ ಚೆಕ್‌ಪೋಸ್ಟ್‌ನಲ್ಲಿ ವೀರಭದ್ರಪ್ಪ ಅವರು ಶನಿವಾರ ರಾತ್ರಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಸಮಯದಲ್ಲಿ ಚಾಲಕನ ನಿರ್ಲಕ್ಷೃದಿಂದ ವೇಗವಾಗಿ ಬಂದ ಕಾರು ರಸ್ತೆಯ ಪಕ್ಕದಲ್ಲಿ ನಿರ್ಮಿಸಿದ್ದ ಚೆಕ್‌ಪೋಸ್ಟ್‌ಗೆ ನುಗ್ಗಿದೆ. ಕಾರಿನಡಿ ಸಿಲುಕಿದ ವೀರಭದ್ರಪ್ಪ ಅವರ ಬಲಗಾಲು ಮುರಿದಿದ್ದು, ತಕ್ಷಣ ಅಲ್ಲಿದ್ದ ಇತರರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವನ್ನು ಆಸ್ಪತ್ರೆಯಲ್ಲಿ ಭೇಟಿಯಾದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಆರೋಗ್ಯ ವಿಚಾರಿಸಿದರು.
ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ವಿ.ವಿ.ಪುರಂ ಸಂಚಾರ ಠಾಣೆ ಪೊಲೀಸರು ಕಾರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆ ಕಾರ್ಯ ನಡೆಸಿದ್ದಾರೆ.

Share This Article

ಮುಖದ ಸೌಂದರ್ಯಕ್ಕೆ ಐಸ್​​ಕ್ಯೂಬ್.. ಕೂಲ್.. ಕೂಲ್! ಐಸ್‌ಕ್ಯೂಬ್‌ನಿಂದ ಸೌಂದರ್ಯದ ಆರೈಕೆ.. Ice Facial Benefits

Ice Facial Benefits:  ಮಹಿಳಯರು ಸೌಂದರ್ಯಪ್ರಿಯರು. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಹಾಗೂ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು  ಮಾರುಕಟ್ಟೆಯಲ್ಲಿ…

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…

ಪೋಷಕರೇ ಹುಷಾರ್‌! ಯಾವುದೇ ಕಾರಣಕ್ಕೂ ಮಕ್ಕಳ ಮುಂದೆ ಈ 5 ವಿಚಾರ ಮಾತನಾಡಲೇಬೇಡಿ… Parents Tips

Parents Tips : ಮಕ್ಕಳಿರುವ ಮನೆ ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ವಿಶೇಷವಾಗಿ ಹೇಳಬೇಕಾಗಿಲ್ಲ. ಆರು ವರ್ಷದವರೆಗೆ…