ಸರ್ಕಾರಿ ಬಸ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 11 ಲಕ್ಷ ರೂ. ಜಪ್ತಿ

ಬಳ್ಳಾರಿ: ಕೆಎಸ್​ಆರ್​ಟಿಸಿ ಬಸ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 11 ಲಕ್ಷ ರೂ. ನಗದನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಹೊಸಪೇಟೆಯ ಮರಿಯಮ್ಮನಹಳ್ಳಿ ಬಳಿಯ ಚೆಕ್​​ಪೋಸ್ಟ್​​ ಬಳಿ ಸ್ಥಿರ ಕಣ್ಗಾವಲು ಪಡೆ ಪರಿಶೀಲನೆ ನಡೆಸುತ್ತಿದ್ದ ವೇಳೆ ಶುಕ್ರವಾರ ರಾತ್ರಿ ನಗದು ವಶ ಪಡಿಸಿಕೊಳ್ಳಲಾಗಿದೆ.

ದಾವಣಗೆರೆಯಿಂದ ಸೋಲಾಪುರಕ್ಕೆ ತೆರಳುತ್ತಿದ್ದ ಬಸ್ (ಕೆಎ-17,ಎಫ್-1673) ನಲ್ಲಿ ಹಣ ಪತ್ತೆಯಾಗಿದೆ. ವಿಚಾರಣೆ ವೇಳೆ ಸೂಕ್ತ ದಾಖಲೆ ನೀಡದ್ದಕ್ಕಾಗಿ ಹಣ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಹಣ ಗಂಗಾವತಿಯ ಜೂಟೂರು ಹನುಮೇಶ ಎಂಬವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ.

ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)