More

    ಚುನಾವಣಾ ಅಧಿಕಾರಿಗಳ ಭರ್ಜರಿ ಬೇಟೆ; ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2 ಕೋಟಿ ರೂ. ನಗದು ವಶ!

    ಬೆಳಗಾವಿ: ಚುನಾವಣೆ ಇನ್ನೇನು ಹತ್ತಿರದಲ್ಲಿದೆ ಎನ್ನುವಾಗ ಮತದಾರರಿಗೆ ಭರ್ಜರಿಯಾಗಿ ಗಿಫ್ಟ್ ಹಂಚುವ, ಬಾಡೂಟ ನೀಡುವ ಪ್ರಕರಣಗಳು ಹೊಸತೇನಲ್ಲ. ಇದೀಗ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಸೇರಿಕೊಂಡು ಭರ್ಜರಿ ಬೇಟೆಯಾಡಿದ್ದು ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ ಬರೋಬ್ಬರಿ 2 ಕೋಟಿ ರೂ. ನಗದು ವಶಕ್ಕೆ ಪಡೆದಿದ್ದಾರೆ.

    ಈ ಘಟನೆ ಬೆಳಗಾವಿ ಸಮೀಪದ ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ನಡೆದಿದೆ. ಈ ಹಣವನ್ನು ಸೂಕ್ತ ದಾಖಲೆಗಳಿಲ್ಲದೇ ಖಾಸಗಿ ಬಸ್ ನಲ್ಲಿ ಸಾಗಿಸಲಾಗುತ್ತಿದ್ದ ಹಿನ್ನೆಲೆಯಲ್ಲಿ ಅಷ್ಟೂ ನಗದನ್ನು ವಶಕ್ಕೆ ಪಡೆಯಲಾಗಿದೆ. ಈ ಖಾಸಗಿ ಬಸ್ಸು (KA 70 1459) ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದು ಅದರಲ್ಲಿ ಹಣ ಸಾಗಿವೆಅಸಸಲಾಗುತ್ತಿತ್ತು.

    ಇಂದು ನಸುಕಿನಜಾವ 3.30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್‌ಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲನೆ‌ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿದ್ದು ಕೆ.ಪಿ.ಆ್ಯಕ್ಟ್ ಪ್ರಕಾರ ಪ್ರಕರಣ ದಾಖಲಿಸಲಾಗಿದ್ದು, ಓರ್ವನನ್ನು ವಶಕ್ಕೆ ಪಡೆಯಲಾಗಿದೆ.

    ಅಪಾರ ಪ್ರಮಾಣದ ಹಣ ಸಿಕ್ಕ ಹಿನ್ನೆಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ‌ ಮಾಹಿತಿ ನೀಡಲಾಗಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಭೇಟಿ ನೀಡಿದ್ದಾರೆ. ಹಿರೇಬಾಗೇವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts