ಸಿಎಂ ಕಾರನ್ನು ಬಿಡದ ಚುನಾವಣಾ ಅಧಿಕಾರಿಗಳು; ಬಸವರಾಜ ಬೊಮ್ಮಾಯಿ‌ ಕಾರು ತಪಾಸಣೆ

BasavarajBommai
Published on

ದೊಡ್ಡಬಳ್ಳಾಪುರ : ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಚುನಾವಣಾ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕಾರನ್ನೂ ತಪಾಸಣೆ ಮಾಡಿದ್ದಾರೆ.

ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಬಸವರಾಜ ಬೊಮ್ಮಾಯಿ ಅವರು ಬರುತ್ತಿದ್ದರು. ಈ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹುಡ್ಯ ಗ್ರಾಮದ ಚೆಕ್ ಪೋಸ್ಟ್ ಬಳಿ ಸಿಎಂ ಕಾರು ತಪಾಸಣೆ ಮಾಡಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಘಾಟಿ ದೇವಾಲಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ವರುಣಾದಲ್ಲಿ ನಾವು ಖಂಡಿತವಾಗಿ ಪ್ರಭಲವಾದ ಪೈಪೋಟಿ ನೀಡುತ್ತೇವೆ. ವಿಜೇಂದ್ರ ಅವರು ಸ್ಪರ್ಧೆ ಮಾಡಬೇಕು ಎಂದು ಜನರ ಅಭಿಪ್ರಾಯವಾಗಿದೆ. ಅಂತಿಮವಾಗಿ ಯಡಿಯೂರಪ್ಪ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಈ ಕುರಿತಾಗಿ ಸಮೀಕ್ಷೆಗಳು ನಡೆಯುತ್ತಿರುತ್ತವೆ. ನೂರಕ್ಕೆ ನೂರು ಬರೆದಿಟ್ಟುಕೊಳ್ಳಿ ನಾವೇ ಅಧಿಕಾರಕ್ಕೆ‌ ಬರುವುದು ಎಂದು ಹೇಳಿದ್ದಾರೆ.

ಈ ಬಾರಿ ನಮ್ಮ ಸಂಪೂರ್ಣ ಬೆಂಬಲದೊಂದಿಗೆ ಅಧಿಕಾರ ಹಿಡಿಯುತ್ತೇವೆ. ಸಿದ್ದರಾಮಯ್ಯ ಕನಸು ಕಾಣುತ್ತಿದ್ದಾರೆ.ಮೀಸಲಾತಿ ಚುನಾವಣಾ ಗಿಮಿಕ್‌ ಎಂಬ ವಿರೋಧ ಪಕ್ಷದ ಆರೋಪ ಮಾಡುತ್ತಿದ್ದಾರೆ. ಅವರ ಸರ್ಕಾರದಲ್ಲಿ ಏಕೆ ಮಾಡಲಿಲ್ಲ? ಈಗ ಆರೋಪ‌ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net