More

    ಚುನಾವಣೆಗೆ ಯೋಜನೆ ರೂಪಿಸಲು ರಾಮದಾಸ ಸಲಹೆ

    ಹುಬ್ಬಳ್ಳಿ : ಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಿಂದ ಕನಿಷ್ಠ 25 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಮಾಜಿ ಸಚಿವ, ವಿಶ್ವಕರ್ಮ ಯೋಜನೆ ರಾಜ್ಯ ಸಂಚಾಲಕ ಎ. ರಾಮದಾಸ ಹೇಳಿದರು.

    ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ಅವರು ಮಾತನಾಡಿದರು.

    ದಿನದಿಂದ ದಿನಕ್ಕೆ ಬಿಜೆಪಿ ಬಲಿಷ್ಠವಾಗಿ ಬೆಳೆಯುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಗೆಲುವು ಕಾಣಲು ಮುಖಂಡರು ಹಾಗೂ ಕಾರ್ಯಕರ್ತರು ಸೂಕ್ತ ಯೋಜನೆ ರೂಪಿಸಬೇಕು ಎಂದು ತಿಳಿಸಿದರು.

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶವು ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಬಹುತೇಕ ಎಲ್ಲ ಸಮುದಾಯದ ಜನರು ಮೋದಿ ಆಡಳಿತವನ್ನು ಮೆಚ್ಚಿದ್ದಾರೆ. ದೇಶದ ಭದ್ರತಾ ವಿಷಯ ಹಾಗೂ ಬಡ, ಮಧ್ಯಮ ವರ್ಗದ ಜನರಿಗೆ ಪ್ರಧಾನಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದರು.

    ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಜನರಿಗಾಗಿ ಸಾಲ ನೀಡುವುದಕ್ಕಾಗಿ ವಿಶ್ವಕರ್ಮ ಯೋಜನೆಯನ್ನು ಪ್ರಧಾನಿ ಜಾರಿಗೊಳಿಸಿದ್ದಾರೆ. ಈಗಾಗಲೇ ಸಾಕಷ್ಟು ಜನರು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಬಡವರಿಗೆ, ರೈತರಿಗೆ, ದಿನಗೂಲಿ ಕಾರ್ವಿುಕರಿಗೆ, ಕುಶಲಕರ್ವಿುಗಳಿಗೆ, ಸಾಕಷ್ಠು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ವಿಶ್ವಕರ್ಮ ಯೋಜನೆ ಅಡಿಯಲ್ಲಿ ಫಲಾನಿಭವಿಗಳು ಅರ್ಜಿ ಹಾಕಿ ಕೇಂದ್ರ ಸರ್ಕಾರದ ಸೌವಲತ್ತಗಳನ್ನು ಪಡೆದುಕೊಳ್ಳಬೇಕು ಎಂದು ಎ.ರಾಮದಾಸ ಸಲಹೆ ನೀಡಿದರು.

    ಧಾರವಾಡ ವಿಭಾಗ ಪ್ರಭಾರಿ ಲಿಂಗರಾಜ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾನಗರ ಜಿಲ್ಲಾ ಅಧ್ಯಕ್ಷ ಸಂಜಯ ಕಪಟಕರ ಅಧ್ಯಕ್ಷತೆ ವಹಿಸಿದ್ದರು.

    ಮೇಯರ್ ವೀಣಾ ಬರದ್ವಾಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ, ತಿಪ್ಪಣ್ಣ ಮಜ್ಜಗಿ, ವಿಜಯಾನಂದ ಶೆಟ್ಟಿ, ಸಂತೋಷ ಚವ್ಹಾಣ, ಪ್ರಭು ನವಲಗುಂದಮಠ, ಬಸವರಾಜ ಗರಗ, ಸುನೀಲ ಮೋರೆ, ರವಿ ನಾಯಕ ಹಾಗೂ ಇತರರು ಉಪಸ್ಥಿತರಿದ್ದರು.

    ===========

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts