More

    ಚುನಾವಣಾ ಫಲಿತಾಂಶ 2023; ರಾಜಸ್ಥಾನದಲ್ಲಿ ಮ್ಯಾಜಿಕ್​ ನಂಬರ್​​ ದಾಟಿದ ಬಿಜೆಪಿ..ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತ

    ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ.  ರಾಜಸ್ಥಾನದಲ್ಲಿ ಒಟ್ಟು 200 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಇದಲ್ಲಿ ಪಕ್ಷಗಳು ಅಧಿಕಾರದ ಚುಕ್ಕಾಣಿ ಹಿಡಿಯಲು 101 ಬಹುಮತ ಬೇಕಾಗಿದೆ. ಆದರೆ ಈಗಾಗಲೇ ಬಿಜೆಪಿ ಮ್ಯಾಜಿಕ್​  ನಂಬರ್​ ದಾಟಿದ್ದು, ಬಿಜೆಪಿ ರಾಜಸ್ಥಾನದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಬಿಜೆಪಿ 107 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 83 ಸ್ಥಾನಗಳಲ್ಲಿ ಪಡೆದು ಸರಿಯಾಗಿ ಪೈಪೋಟಿ ನಡೆಸುತ್ತಿದ್ದಾರೆ. ಇತರೆ 04 ಸ್ಥಾನ ಪಡೆದಿದ್ದು, ಪ್ರಸ್ತುತ, ಟ್ರೆಂಡ್‌ಗಳು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸ್ಪರ್ಧೆಯನ್ನು ತೋರಿಸುತ್ತವೆ. ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತ ಎನ್ನುವ ಮಾತು ಕೇಳಿ ಬರುತ್ತಿದೆ. ಆದರೆ ಬಹುಮತದ ಸ್ಪಷ್ಟ ಚಿತ್ರಣಕ್ಕೆ ಕಾದು ನೋಡಬೇಕಾಗಿದೆ.

    ಚುನಾವಣಾ ಫಲಿತಾಂಶ 2023; ರಾಜಸ್ಥಾನದಲ್ಲಿ ಮ್ಯಾಜಿಕ್​ ನಂಬರ್​​ ದಾಟಿದ ಬಿಜೆಪಿ..ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತ

    ಇತ್ತೀಚೆಗೆ ಚುನಾವಣೆ ನಡೆದ 5 ರಾಜ್ಯಗಳ ಪೈಕಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದೆ. ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಮಾತ್ರ ವಿಧಾನಸಭೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಕೆಲವೇ ಗಂಟೆಗಳಲ್ಲಿ ಯಾವ ರಾಜ್ಯ ಯಾವ ಪಕ್ಷದ ತೆಕ್ಕೆಗೆ ಬೀಳಲಿದೆ ಎಂಬುದು ಸ್ಫಷ್ಟವಾಗಲಿದೆ. ಮಿಜೋರಾಂ ರಾಜ್ಯದಲ್ಲಿ ನಾಳೆ ಮತಗಳ ಎಣಿಕೆಯಾಗಲಿದೆ.

    ಮಧ್ಯಪ್ರದೇಶದಲ್ಲಿ 230 ವಿಧಾನಸಭಾ ಕ್ಷೇತ್ರಗಳಿವೆ. ಇಲ್ಲಿ ಬಹುಮತಕ್ಕೆ 116 ಸ್ಥಾನಗಳ ಅಗತ್ಯವಿದೆ. ಛತ್ತೀಸ್‌ಗಢದಲ್ಲಿ 90 ವಿಧಾನಸಭಾ ಸ್ಥಾನಗಳಿದ್ದು, ಇಲ್ಲಿ ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ. ರಾಜಸ್ಥಾನದಲ್ಲಿ 200 ವಿಧಾನಸಭಾ ಸ್ಥಾನಗಳಿವೆ. ಯಾವುದೇ ಪಕ್ಷಕ್ಕೆ ಸರ್ಕಾರ ರಚಿಸಲು 101 ಸ್ಥಾನಗಳ ಅಗತ್ಯವಿದೆ. ತೆಲಂಗಾಣದಲ್ಲಿ 119 ವಿಧಾನಸಭಾ ಸ್ಥಾನಗಳಿವೆ. ಇಲ್ಲಿ ಬಹುಮತವು 110 ಆಗಿದೆ. ಮಿಜೋರಾಂನಲ್ಲಿ 40 ವಿಧಾನಸಭಾ ಸ್ಥಾನಗಳಿವೆ.  ಇಲ್ಲಿ ಬಹುಮತದ ಸಂಖ್ಯೆ 21. ಈ ನಾಲ್ಕು ರಾಜ್ಯಗಳ   ವಿಧಾನಸಭಾ ಕ್ಷೇತ್ರಗಳಲ್ಲಿ ಯಾವ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎನ್ನುವುದು ಕಾದು ನೋಡಬೇಕಾಗಿದೆ.

    ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆದಿದೆ. ಮೊದಲ ಹಂತದಲ್ಲಿ ನವೆಂಬರ್ 7 ರಂದು 20 ಸ್ಥಾನಗಳಿಗೆ ಮತದಾನ ನಡೆದಿತ್ತು. ಇದರ ನಂತರ, ನವೆಂಬರ್ 17 ರಂದು, ಛತ್ತೀಸ್‌ಗಢದ ಉಳಿದ 70 ಮತ್ತು ಮಧ್ಯಪ್ರದೇಶದ 230 ಸ್ಥಾನಗಳಿಗೆ ಮತದಾನ ನಡೆಯಿತು. ನವೆಂಬರ್ 25 ರಂದು ರಾಜಸ್ಥಾನದಲ್ಲಿ 199 ಸ್ಥಾನಗಳಿಗೆ ಮತದಾನ ನಡೆದಿದ್ದರೆ, ತೆಲಂಗಾಣದಲ್ಲಿ ನವೆಂಬರ್ 30 ರಂದು 119 ಸ್ಥಾನಗಳಿಗೆ ಮತದಾನ ನಡೆದಿತ್ತು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts