More

    ಒಕ್ಕಲಿಗರ ಸಂಘಕ್ಕೆ 3 ತಿಂಗಳೊಳಗೆ ಚುನಾವಣೆ ನಡೆಸಿ; ಸರ್ಕಾರಕ್ಕೆ ಹೈಕೋರ್ಟ್ ಆದೇಶ

    ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘಕ್ಕೆ ಮೂರು ತಿಂಗಳ ಒಳಗೆ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಸಂಘಕ್ಕೆ ಚುನಾವಣೆ ನಡೆಸಲು ನಿರ್ದೇಶಿಸುವಂತೆ ಕೋರಿ ಚಿತ್ರ ನಿರ್ಮಾಪಕ ಕೃಷ್ಣೇಗೌಡ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಪೀಠ, ಈ ಆದೇಶ ಮಾಡಿದೆ.

    ಅರ್ಜಿದಾರರ ಪರ ವಕೀಲ ಧರ್ಮಪಾಲ ಗೌಡ ವಾದ ಮಂಡಿಸಿ, ಸಂಘದ ಪದಾಧಿಕಾರಿಗಳ ನಡುವೆ ಉಂಟಾದ ಭಿನ್ನಾಭಿಪ್ರಾಯಗಳಿಂದ ಹಿಂದಿನ ಕಾರ್ಯಕಾರಿ ಸಮಿತಿಯನ್ನು ಪದಚ್ಯುತಿಗೊಳಿಸಲಾಗಿತ್ತು. ಬಳಿಕ ಸಂಘದ ಕೆಲಸ-ಕಾರ್ಯಗಳ ನಿರ್ವಹಣೆಗೆ ನಿವೃತ್ತ ಐಪಿಎಸ್ ಅಧಿಕಾರಿ ಶಂಕರಲಿಂಗೇಗೌಡ ಅವರನ್ನು ಸರ್ಕಾರ ನೇಮಕ ಮಾಡಿತ್ತು. ಕಾನೂನು ಪ್ರಕಾರ ಆಡಳಿತಾಧಿಕಾರಿ ನೇಮಕಗೊಂಡ 6 ತಿಂಗಳ ನಂತರ ಅವರ ಅವಧಿ ಹಾಗೂ ಅಧಿಕಾರ ಪೂರ್ಣಗೊಳ್ಳುತ್ತದೆ. ಅಷ್ಟರೊಳಗೆ ಚುನಾವಣೆ ನಡೆಸಬೇಕಾಗುತ್ತದೆ. ಆದರೆ, ಕಳೆದ ಎರಡೂವರೆ ವರ್ಷಗಳಿಂದಲೂ ಆಡಳಿತಾಧಿಕಾರಿಯ ಅವಧಿ ವಿಸ್ತರಿಸಿಕೊಂಡು ಬರಲಾಗುತ್ತಿದೆಯೇ ಹೊರತು, ಸಂಘಕ್ಕೆ ಚುನಾವಣೆ ನಡೆಸುತ್ತಿಲ್ಲ. ಆದ್ದರಿಂದ, ಕೂಡಲೇ ಚುನಾವಣೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು.

    ಈ ವಾದವನ್ನು ಪರಿಗಣಿಸಿದ ಪೀಠ, ನಿಯಮಗಳ ಪ್ರಕಾರ 6 ತಿಂಗಳಿಗಿಂತ ಹೆಚ್ಚಿನ ಅವಧಿಗೆ ಆಡಳಿತಾಧಿಕಾರಿಯನ್ನು ಮುಂದುವರಿಸುವಂತಿಲ್ಲ. ಆದರೆ, ಈ ಪ್ರಕರಣದಲ್ಲಿ ಎರಡೂವರೆ ವರ್ಷಗಳಿಂದಲೂ ಆಡಳಿತಾಧಿಕಾರಿಯ ಅವಧಿ ಹಾಗೂ ಅಧಿಕಾರವನ್ನು ವಿಸ್ತರಿಸಿಕೊಂಡು ಬರಲಾಗುತ್ತಿದೆ. ಆದ್ದರಿಂದ, ಸಂಘಕ್ಕೆ ಕೂಡಲೇ ಚುನಾವಣೆ ನಡೆಸುವುದು ಅಗತ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಪೀಠ, ಮುಂದಿನ 3 ತಿಂಗಳ ಒಳಗೆ ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.

    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

    ನಟ ದರ್ಶನ್​ ಈಗ ಕರ್ನಾಟಕ ಕೃಷಿ ಇಲಾಖೆ ರಾಯಭಾರಿ; ಯಾವುದೇ ಸಂಭಾವನೆ ಪಡೆಯದೇ ಅಂಬಾಸಡರ್..

    ಸಾಹುಕಾರ ತಪ್ಪು ಮಾಡಿಲ್ಲ… ಅವ್ರಿಗೆ ಅದೆಲ್ಲಾ ಗೊತ್ತೇ ಇಲ್ಲ… ನಾನು ಸಾಯ್ಬೇಕು… ಬೆಂಕಿಗೆ ಬಿದ್ದ ಅಭಿಮಾನಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts