More

    ಎನ್‌ಐಟಿಕೆ ಸ್ಟ್ರಾಂಗ್ ರೂಂನಲ್ಲಿದೆ ಅಭ್ಯರ್ಥಿಗಳ ಭವಿಷ್ಯ

    ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಸಾಂಗವಾಗಿ ನಡೆದಿದ್ದು, ಮತಪೆಟ್ಟಿಗೆಗಳನ್ನು ಸುರತ್ಕಲ್ ಎನ್‌ಐಟಿಕೆಯ ಭದ್ರತಾ ಕೊಠಡಿಯಲ್ಲಿ ಇಡಲಾಗಿದೆ. ಭದ್ರತಾ ಕೊಠಡಿಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.


    ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಒಂಭತ್ತು ಮಂದಿ ಸ್ಪರ್ಧಿಸಿದ್ದು, ಇವರ ಚುನಾವಣಾ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಜೂನ್ 4ರಂದು ಮತಗಳ ಎಣಿಕೆ ನಡೆಯಲಿದೆ. ಅಲ್ಲಿಯವರೆಗೆ ಭದ್ರತಾ ಕೊಠಡಿಗಳಿಗೆ ಸಿಎಆರ್ ವಿಭಾಗದ ಡಿಸಿಪಿ ಸಿದ್ದನಗೌಡ ಪಾಟೀಲ್ ಅವರ ನೇತೃತ್ವದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಭದ್ರತಾ ಕೊಠಡಿಗೆ ಮೂರು ಪಾಳಿಯಲ್ಲಿ ಭದ್ರತೆ ಒದಗಿಸಲಾಗಿದೆ. ಪ್ರತೀ ಪಾಳಿಯಲ್ಲಿ 40 ಮಂದಿ ಸಿವಿಲ್ ಪೊಲೀಸರು, 40 ಸಶಸ ರಾಜ್ಯ ಮೀಸಲು ಪೊಲೀಸ್ ಪಡೆಯ ಪೊಲೀಸಲು ಭದ್ರತೆ ಒದಗಿಸಲಿದ್ದಾರೆ. ಅಲ್ಲದೆ ಭದ್ರತಾ ಕೊಠಡಿಯ ಸುತ್ತ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts