More

    ಕರಪತ್ರದಲ್ಲಿ ಮುಖಂಡರ ಭಾವಚಿತ್ರ ನಿಷೇಧ

    ಎನ್.ಆರ್.ಪುರ: ಗ್ರಾಪಂ ಚುನಾವಣೆಯಲ್ಲಿ ಅಭ್ಯರ್ಥಿಗಳು ಯಾವುದೇ ಪಕ್ಷದ ಮುಖಂಡರ ಭಾವಚಿತ್ರ ಹಾಕಿ ಕರ ಪತ್ರ ಹಂಚಬಾರದು ಎಂದು ತಹಸೀಲ್ದಾರ್ ರೇಣುಕಾ ಹೇಳಿದರು.

    ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಅಭ್ಯರ್ಥಿಗಳು ಯಾವುದೇ ಪಕ್ಷದ ಬಾವುಟ, ಚಿಹ್ನೆ ಬಳಸಿ ಪ್ರಚಾರ ಮಾಡುವಂತಿಲ್ಲ. ಈಗಾಗಲೇ ಕಣದಲ್ಲಿರುವ ಎಲ್ಲ ಅಭ್ಯರ್ಥಿಗಳಿಗೂ ಚಿಹ್ನೆ ನೀಡಲಾಗಿದೆ. ರಾಜಕೀಯ ಪಕ್ಷದ ಮುಖಂಡರು, ಸ್ಪರ್ಧಿಗಳು ಕಾನೂನು ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

    ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ ವೇದಿಕೆ ಮೇಳೆ ಪಕ್ಷದ ಬಾವುಟ, ಬ್ಯಾನರ್​ಗಳನ್ನು ಬಳಸುವಂತಿಲ್ಲ. ಅಭ್ಯರ್ಥಿಗಳು ತಮ್ಮ ಪಕ್ಷದ ಅಥವಾ ಪಕ್ಷದ ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರ ಮತ ನೀಡುವಂತೆ ಮತದಾರರನ್ನು ಓಲೈಸುವಂತಿಲ್ಲ. ಅಭ್ಯರ್ಥಿಗಳು ಟಿವಿ ಮಾಧ್ಯಮಗಳು, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ, ಪಕ್ಷದ ಚಿಹ್ನೆ ಬಳಸಿ ಜಾಹೀರಾತು ನೀಡುವುದನ್ನು ನಿಷೇಧಿಸಲಾಗಿದೆ. ಚುನಾವಣೆ ಫಲಿತಾಂಶದ ಬಳಿಕ ಯಾವುದೇ ಅಭ್ಯರ್ಥಿಗಳು ವಿಜಯೋತ್ಸವ ಆಚರಿಸುವುದು, ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts