More

    ಆಯೋಗದ ಸೂಚನೆಯಂತೆ ಕೆಲಸ ನಿರ್ವಹಿಸಿ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿಕೆ

    ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆ ಕರ್ತವ್ಯಕ್ಕೆಂದು ನಿಯೋಜನೆಯಾಗಿರುವ ಅಧಿಕಾರಿ ಹಾಗೂ ಸಿಬ್ಬಂದಿ ಚುನಾವಣಾ ಆಯೋಗ ನೀಡುವ ಸೂಚನೆಗಳಂತೆ ನಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ತಿಳಿಸಿದರು.
    ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಚುನಾವಣಾ ವಿಷಯದಲ್ಲಿ ಸ್ವಂತ ವಿವೇಚನಗೆ ಅವಕಾಶವಿಲ್ಲ. ವಿವಿಧ ರೀತಿಯ ಕಾಯ್ದೆಗಳಿದ್ದು, ಅವುಗಳನ್ನು ಅನುಸರಿಸಿ ನಿಷ್ಪಕ್ಷಪಾತ, ನಿರ್ಭಯ ಮತ್ತು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದರು.
    ಚುನಾವಣಾ ವೇಳಾಪಟ್ಟಿ ಪ್ರಕಟವಾದ ದಿನಾಂಕದಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬರುತ್ತಿತ್ತು. ಈ ಬಾರಿ ಮಾದರಿ ನೀತಿ ಸಂಹಿತೆ ಜಾರಿಗೂ ಮುನ್ನವೇ ಸಂಭಾವ್ಯ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಹಾಗೂ ಇನ್ನಿತರೆ ಮೂಲಗಳಿಂದ ಮತದಾರರಿಗೆ ಹಣದ ಆಮಿಷ ಒಡ್ಡುತ್ತಿದ್ದಾರೆ. ಆದ್ದರಿಂದ ದಾಳಿ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಿ. ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಮಯಪ್ರಜ್ಞೆ ಅತಿಮುಖ್ಯ. ಯಾವುದೇ ಕಾರಣಕ್ಕೂ ಚುನಾವಣಾ ಕೆಲಸದಲ್ಲಿ ವಿಳಂಬ ಮಾಡಕೂಡದು. ಅಶಿಸ್ತು ಕಂಡುಬಂದಲ್ಲಿ ಕ್ರಮಕ್ಕೆ ತ್ತಾಯಿಸಿ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ತರಬೇತುದಾರ ಡಾ.ಶಶಿಧರ್‌ರೆಡ್ಡಿ, ಉಪವಿಭಾಗಾಧಿಕಾರಿಗಳಾದ ಕೀರ್ತನಾ, ನಂದೀಶ್, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ, ಜಿಪಂ ಉಪಕಾರ್ಯದರ್ಶಿ ಎಂ.ಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜು, ತಹಸೀಲ್ದಾರ್ ವಿಜಯ್ಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts